".

Header Ads

ಗಂಧದ ಮರ ಕಡಿದರೆ 5 ವರ್ಷ ಜೈಲು ಶಿಕ್ಷೆ , 50 ಸಾವಿರ ದಂಡ : ಹೈಕೋರ್ಟ್ ಮಹತ್ವದ ಆದೇಶ

 


 ಗಂಧದ ಮರ ಕಳವು ಮಾಡಿದ್ದ ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ ಜೊತೆ 1 ಲಕ್ಷ ರೂಪಾಯಿ ದಂಡ ವಿಧಿಸುವ ಮೂಲಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನಲೆ: ಗಂಧದ ಮರ ಕಳವು ಮಾಡಿದ್ದ ಆರೋಪದಲ್ಲಿ ಆರೋಪಿಯೊಬ್ಬರಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ 5 ವರ್ಷಗಳ ಶಿಕ್ಷೆಯನ್ನು ಎತ್ತಿಹಿಡಿದಿರುವ ಹೈಕೋರ್ಟ್, 1 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.

ವಿಚಾರಣಾ ನ್ಯಾಯಾಲಯ ವಿಧಿಸಿದ್ಧ ದಂಡದ ಪ್ರಮಾಣ ಹೆಚ್ಚಳ ಮಾಡುವಂತೆ ಕೋರಿದ್ದ ರಾಜ್ಯ ಸರ್ಕಾರ ಮತ್ತು ಶಿಕ್ಷೆ ರದ್ದು ಕೋರಿ ಮಂಡ್ಯ ಜಿಲ್ಲೆ ಬಲ್ಲೆನಹಳ್ಳಯ ಆರೋಪಿ ದೇವರಾಜಚಾರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣನವರ್ ಅವರಿದ್ದ ನ್ಯಾಯಪೀಠ, ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಎತ್ತಿಹಿಡಿದಿದೆ. ಆರೋಪಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

Powered by Blogger.