ನಾಪತ್ತೆಯಾಗಿದ್ದ ಹಿಂದೂ ಯುವತಿ ಕ್ರಿಮಿನಲ್ ಪ್ರಕರಣ ಇರುವ ಮುಸ್ಲಿಂ ಯುವಕನ ಜೊತೆ ಪತ್ತೆ,ವಿಶ್ವಹಿಂದೂ ಪರಿಷದ್ ಶರಣ್ ಪಂಪ್ವೆಲ್ ರವರು ಆಕ್ರೋಶ
ನಾಪತ್ತೆಯಾಗಿದ್ದ ಹಿಂದೂ ಯುವತಿಯನ್ನು ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪಾಂಡೇಶ್ವರ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದಾರೆ.
ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತ ಈಗಾಗಲೇ ಒಂದು ಮದುವೆಯಾಗಿದ್ದು ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ ಈತನ ವಿರುದ್ದ 8 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ.ಮಂಗಳೂರಿನ ಕಾಲೇಜಿನಲ್ಲಿ ಕಲಿಯುತ್ತಿದ್ದ ನನ್ನ ಮಗಳನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ಯುವತಿಯ ತಂದೆ ಮಂಗಳೂರು ಪೊಲೀಸ್ ಕಮೀಷನರ್ ರವರಿಗೆ ದೂರು ನೀಡಿದ್ದಾರೆ.ಲವ್ ಜಿಹಾದ್ ಕರಾವಳಿಯಲ್ಲಿ ಹೆಚ್ಚುತ್ತಿದೆ. ಇದರ ವಿರುದ್ಧ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಬೇಕಾಗಿದೆ. ಪ್ರೀತಿ , ಮದುವೆ ಹೆಸರಲ್ಲಿ ಹಿಂದೂ ಯುವತಿಯರ ಮತಾಂತರ ‘ಲವ್ ಜಿಹಾದ್’ ಗೆ ಕಡಿವಾಣ ಹಾಕಲು ಪ್ರಬಲ ಕಾನೂನು ದೇಶದಲ್ಲಿ ಬರಬೇಕಾಗಿದೆ ಎಂದು ವಿಶ್ವಹಿಂದೂ ಪರಿಷದ್ ಶರಣ್ ಪಂಪ್ವೆಲ್ ರವರು ಆಕ್ರೋಶ ಹೊರಹಾಕಿದ್ದಾರೆ.
Post a Comment