".

Header Ads

ದೂರು ನೀಡಲು ಬಂದ ಪತ್ನಿಯನ್ನು ಹತ್ಯೆಗೈದ ಪೊಲೀಸ್ ಕಾನ್ ಸ್ಟೇಬಲ್..

 


ನಗರದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನು ಪೊಲೀಸ್ ಕಾನ್ ಸ್ಟೇಬಲ್ ಆಗಿರುವ ಪತಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಸಂಭವಿಸಿದೆ.

ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಲೋಕನಾಥ್ ಪತ್ನಿ ಮಮತಾ ಪತಿಯಿಂದಲೇ ಹತ್ಯೆಯಾದವರು. ಆಕೆಯನ್ನು ಚಾಕುವಿನಿಂದ ಇರಿದಿದ್ದನ್ನು ಕಂಡ ಪೊಲೀಸರು ತಕ್ಷಣವೇ ಹಿಮ್ಸ್ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟರು. ಪೊಲೀಸರು ಆರೋಪಿ ಪತಿಯನ್ನು ವಶಕ್ಕೆ ಪಡೆದಿದ್ದಾರೆ.

ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿದ್ದರಿಂದ ಇಂದು ಪತಿ ವಿರುದ್ಧ ದೂರು ನೀಡಲು ಎಸ್ಪಿ ಕಚೇರಿಗೆ ಬಂದಿದ್ದ ಪತ್ನಿಯ ಮೇಲೆ ಸಿಟ್ಟಿಗೆದ್ದ ಲೋಕನಾಥ್ ದುಷ್ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಪೊಲೀಸರು ಹತ್ಯೆ ಪ್ರಕರಣ ದಾಖಲಿಸಿಕೊಂಡು, ಆರೋಪಿ ಪತಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
Powered by Blogger.