".

Header Ads

ಕದ್ರಿ ಮಂಜುನಾಥ ಸ್ವಾಮಿ ಗುಡಿಯ ಮುಂದೆ ಹೋಗಿ ಕಾಲಿನಿಂದ ಬಾಗಿಲು ಒದ್ದು ಯುವಕನ ಹುಚ್ಚಾಟ

 



ಮಂಗಳೂರಿನ ಪುಣ್ಯಕ್ಷೇತ್ರ ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನ ಹುಚ್ಚಾಟ ನಡೆಸಿದ ಘಟನೆ ವರದಿಯಾಗಿದ್ದು.  ಈ ಬಗ್ಗೆ ಕದ್ರಿ ಠಾಣೆಗೆ ದೇವಸ್ಥಾನದ ಮುಖ್ಯಾಧಿಕಾರಿ ದೂರು ದಾಖಲಿಸಿದ್ದಾರೆ.

  ಸನ್ನಿಧಿಯಲ್ಲಿ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು, ಬೈಕ್ ಚಲಾಯಿಸಿಕೊಂಡು ನೇರ ಕದ್ರಿ ದೇವಸ್ಥಾನದ ಪ್ರಾಂಗಣ ಪ್ರವೇಶಿಸಿದ್ದ ಯುವಕ, ಬಳಿಕ ದೇವಸ್ಥಾನದ ಒಳಗೆ ಪ್ರವೇಶ ಮಾಡಿ ಹುಚ್ಚಾಟ ಮಾಡಿದ್ದಾನೆ. ಅಲ್ಲದೆ ಅಣ್ಣಪ್ಪ ಸ್ವಾಮಿಯ ಗುಡಿಯ ಮುಂದೆ ಹೋಗಿ ಕಾಲಿನಿಂದ ಬಾಗಿಲು ಒದ್ದು ಅಪಚಾರ ಮಾಡಿದ್ದಾನೆ ಎಂದು ಹೇಳಲಾಗಿದೆ.

ಈ ವೇಳೆ ಪ್ರಶ್ನೆ ಮಾಡಿದ ಅರ್ಚಕರ ಮೇಲೂ ಹಲ್ಲೆಗೆ ಯತ್ನಿಸಿ ,  ಬಳಿಕ ದೈವಸ್ಥಾನದ ಬಳಿ ಇದ್ದ ಕತ್ತಿಯನ್ನು ಕೈಗೆತ್ತಿಕೊಂಡು ಹುಚ್ಚಾಟ ನಡೆಸಿರೋ ಮಾಹಿತಿ ಇದೆ. ಈ ವೇಳೆ ಸ್ಥಳದಲ್ಲಿದ್ದವರು ಯುವಕನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಸದ್ಯ ಘಟನೆ ಬಗ್ಗೆ ಕದ್ರಿ ಠಾಣೆಗೆ ದೇವಸ್ಥಾನದ ಮುಖ್ಯಾಧಿಕಾರಿ ದೂರು ನೀಡಿದ್ದು, ಯುವಕನ ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ನಡೆಸುತ್ತಿದ್ದಾರೆ.   ಈ ಯುವಕನನ್ನ  ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ‌ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ಇದೆ.

Powered by Blogger.