".

Header Ads

ಮುಡಾ' ಸೈಟ್ ಹಂಚಿಕೆ ವಿಚಾರದಲ್ಲಿ ನಕಲಿ ದಾಖಲೆ ಸೃಷ್ಟಿ - ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ , ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲು!

 


'ಮುಡಾ' ದಲ್ಲಿ ನಡೆದಂತಹ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ವಿಜಯನಗರ ಠಾಣೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತರು ಒಬ್ಬರು ದೂರು ನೀಡಿದ್ದಾರೆ.

ಹೌದು ಮುಡಾ ಪ್ರಕರಣದಲ್ಲಿ ಸೈಟ್ ಹಂಚಿಕೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಮುಡಾ ಸೈಟ್ ಹಂಚಿಕೆ ವಿಚಾರದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಸಿದ್ದರಾಮಯ್ಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯ ಕೃಷ್ಣರಿಂದ ಇದೀಗ ದೂರು ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ವಿರುದ್ಧವು ದೂರು ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಡಿಸಿ, ತಹಸಿಲ್ದಾರ್, ಉಪನೊಂದಣಾಧಿಕಾರಿ ಮುಡಾ ಅಧಿಕಾರಿಗಳ ಶಾಮೀಲು ಎಂದು ದೂರು ದಾಖಲಿಸಿದ್ದಾರೆ. ಪೊಲೀಸರ ಜೊತೆಗೆ ರಾಜ್ಯಪಾಲ, ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸ್ನೇಹಮಯಿ ಕೃಷ್ಣ ಅವರು ಪತ್ರ ಬರೆದಿದ್ದಾರೆ.



Powered by Blogger.