".

Header Ads

ಮೊಬೈಲ್ ಟವರ್ ಬ್ಯಾಟರಿ ಕಳ್ಳತನ, ಆರೋಪಿ ಅರೆಸ್ಟ್

 


ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಟವರ್ ಗಳ ಬ್ಯಾಟರಿಗಳನ್ನು ಮತ್ತು ಕಂಪೌಂಡ್ ಗೇಟ್ ಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತನನ್ನು ಕೇರಳ ಇಟ್ಟಿ ಪನಿಕರ್(58) ಎಂದು ಗುರುತಿಸಲಾಗಿದೆ. ಆರೋಪಿ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಎರ್ ಟೆಲ್ ಕಂಪೆನಿಯ ಮೊಬೈಲ್ ಟವರ್ ಗಳಲ್ಲಿರುವ ಬ್ಯಾಟರಿಗಳನ್ನು ಕಳ್ಳತನ ಮಾಡಿದ್ದ ಅಲ್ಲದೆ ಐಕಳ ಗ್ರಾಮದ ನೆಲ್ಲಿಗುಡ್ಡೆ ಕ್ರಾಸ್ ಎಂಬಲ್ಲಿ ಜಾಗಕ್ಕೆ ಅಳವಡಿಸಿರುವ 5 ಕಬ್ಬಿಣದ ಗೇಟ್ ಗಳನ್ನು ಕದ್ದೊಯ್ದಿದ್ದ, ಈ ಕುರಿತಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ 3 ಪ್ರತ್ಯೇಕ ಪ್ರಕರಣಗಳು ದಾಖಲಾಗಿರುತ್ತದೆ.ಈ ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಯಿಂದ 39 ಬ್ಯಾಟರಿಗಳನ್ನು ಮತ್ತು ಕಬ್ಬಿಣದ ಕಂಪೌಂಡ್ ಗೇಟ್ ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
1. ಮೊಬೈಲ್ ಟವರ್ ಗೆ ಸಂಬಂಧಿಸಿದ ಬ್ಯಾಟರಿಗಳು ಒಟ್ಟು-೩೯ ಇದರ ಅಂದಾಜು ಮೌಲ್ಯ 2,56,000 ರೂಪಾಯಿ 2. ಕಬ್ಬಿಣದ ಗೇಟ್ ಗಳು-3, ಇದರ ಅಂದಾಜು ಮೌಲ್ಯ 52 ಸಾವಿರ ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಪಿಕ್ ಅಪ್ ಗೂಡ್ಸ್ ಟೆಂಪೋವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.



Powered by Blogger.