ಕ್ಯಾಪ್ಟನ್ ಬ್ರಿಜೇಶ್ ಚೌಟರ ಮನವಿ ಬೆನ್ನಲ್ಲೇ ಮಂಗಳೂರು ಬೆಂಗಳೂರು ಮಧ್ಯೆ ವಿಶೇಷ ರೈಲು ಸಂಚಾರ
ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟಿ ಸೇರಿದಂತೆ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡು ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಈ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮನವಿಗೆ ಸ್ಪಂದಿಸಿದ ರೈಲ್ವೆ ಅಧಿಕಾರಿಗಳು ಬೆಂಗಳೂರು ಮಂಗಳೂರು ನಡುವೆ ವಿಶೇಷ ರೈಲು ಓಡಿಸಲು ನಿರ್ಧರಿಸದ್ದಾರೆ.
– ಜು. 19ರಂದು ರೈಲು ಸಂಖ್ಯೆ 06547 ಎಸ್‌ಬಿಸಿ ಬೆಂಗಳೂರಿನಿಂದ ಹೊರಡಲಿದೆ.
– ಜು.20ರಂದು ರೈಲು ಸಂಖ್ಯೆ 06548 ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳಲಿದೆ.
– ಜು.21 ಹಾಗೂ 22ರಂದು ರೈಲು ಸಂಖ್ಯೆ 06549 ಯಶವಂತಪುರದಿಂದ ಮಂಗಳೂರು ಜಂಕ್ಷನ್‌ಗೆ ಬರಲಿದೆ.
– ಜು.21 ಹಾಗೂ 22 ರಂದು ರೈಲು ಸಂಖ್ಯೆ 06550 ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳಲಿವೆ.
Post a Comment