".

Header Ads

ಬ್ರೆಜಿಲ್‌ನಲ್ಲಿ ವಿಮಾನ ದುರಂತ – ಎಲ್ಲಾ 62 ಮಂದಿ ಸಾವು

 


ಪ್ರಾದೇಶಿಕ ಟರ್ಬೊಪ್ರೊಪ್ ವಿಮಾನವು ಶುಕ್ರವಾರ ಬ್ರೆಜಿಲ್‌ನ ಸಾವೊ ಪಾಲೊ ಬಳಿ ಪತನಗೊಂಡಿದ್ದು  ಅದರಲ್ಲಿದ್ದ ಸಿಬ್ಬಂದಿ ಪ್ರಯಾಣಿಕರು ಸೇರಿ ಎಲ್ಲಾ 62 ಪ್ರಯಾಣಿಕರು ಸಾವನ್ನಪ್ಪಿದ್ದಾರೆ.ಪರಾನಾ ರಾಜ್ಯದ ಕ್ಯಾಸ್ಕಾವೆಲ್‌ನಿಂದ ಸಾವೊ ಪೌಲೋ   ಮುಖ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್‌ಲೈನ್‌   ವಿಮಾನವು ಸಾವೊ ಪಾಲೊದಿಂದ ವಾಯುವ್ಯಕ್ಕೆ 80 ಕಿಮೀ (50 ಮೈಲುಗಳು) ದೂರದಲ್ಲಿರುವ ವಿನ್ಹೆಡೊ ಪಟ್ಟಣದಲ್ಲಿ ಪತನಗೊಂಡಿದೆ.
ವಿಮಾನ ವಸತಿ ಪ್ರದೇಶದಲ್ಲಿ ಬಿದ್ದರೂ ನಾಗರಿಕರ ಸಾವು ನೋವಾಗಿಲ್ಲ ಎಂದು ವರದಿಯಾಗಿದೆ. ಪೈಲಟ್‌ ವಿಮಾನ ಮನೆಗಳ ಮೇಲೆ ಬೀಳುವುದನ್ನು ತಪ್ಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Powered by Blogger.