".

Header Ads

8 ವಾಹನಗಳಿಗೆ ಗುದ್ದಿದ BMTC ವೋಲ್ವೋ ಬಸ್‌! ಬೆಚ್ಚಿ ಬೀಳಿಸುತ್ತೆ ಅಪಘಾತದ ವಿಡಿಯೋ!

 


ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದ ವಿಡಿಯೋವೊಂದು ಜನರನ್ನು ಬೆಚ್ಚಿ ಬೀಳಿಸಿದೆ. ಒಂದೆರಡಲ್ಲ ಬರೋಬ್ಬರಿ 8 ವಾಹನಗಳಿಗೆ ಬಿಎಂಟಿಸಿ (BMTC) ವೋಲ್ವೋ ಬಸ್‌ ಗುದ್ದಿದ್ದು, ಭೀಕರ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಂದಹಾಗೆ ಈ ಘಟನೆ, ಹೆಬ್ಬಾಳ ಫ್ಲೈಓವರ್ ಮೇಲೆ ನಡೆದಿದ್ದು, ಬಿಎಂಟಿಸಿ ವೋಲ್ವೋ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಮಂಗಳವಾರ ಹೆಬ್ಬಾಳ ಫ್ಲೈಓವರ್ ಮೇಲೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎನ್ನಲಾಗಿದೆ.


ಆರಂಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಬೈಕ್‌ಗೆ ಗುದ್ದಿದೆ, ಆ ಬೈಕ್‌ ಮುಂದೆ ಇದ್ದ ಬೈಕ್‌ಗೆ ಗುದ್ದಿದ್ದು, ಅಷ್ಟು ಮಾತ್ರವಲ್ಲದೇ, ಮತ್ತೆ ಮುಂದಕ್ಕೆ ಚಲಿಸಿದ ಬಸ್ ದಾರಿಯುದ್ದಕ್ಕೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ನಿನ್ನೆ ಬೆಳಿಗ್ಗೆ 9-25 ಕ್ಕೆ ಹೆಬ್ಬಾಳ ಫ್ಲೈ ಓವರ್ ಮೇಲೆ ಈ ಘಟನೆ ನಡೆದಿದ್ದು, ಸದ್ಯ ಈ ಅಪಘಾತದ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಸ್ ನಾಲ್ಕು ಕಾರು, ನಾಲ್ಕು ಬೈಕಿಗಳಿಗೆ ಡಿಕ್ಕಿ ಹೊಡೆದಿರುವುದು ಕಂಡು ಬಂದಿದೆ. 

Powered by Blogger.