".

Header Ads

ಲಾಡ್ಜ್‌ನಲ್ಲಿ ಅನ್ಯಕೋಮಿನ ಜೋಡಿ ಪತ್ತೆ..!

 

ಪುತ್ತೂರು: ಇಲ್ಲಿನ ಲಾಡ್ಜ್ ಒಂದರಲ್ಲಿ ಅನ್ಯಕೋಮಿನ ಜೋಡಿ ಪತ್ತೆಯಾಗಿದ್ದು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನೀಡಿದ ದೂರಿನ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಆಗಮಿಸಿ ವಿಚಾರಣೆ ನಡೆಸಿದ್ದಾರೆ.ಇಲ್ಲಿನ ನೆಹರೂ ನಗರದಲ್ಲಿ ಕಾರ್ಯಾಚರಿಸುತ್ತಿರುವ ಲಾಡ್ಜ್‌ವೊಂದರಲ್ಲಿ ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಕರೆದುಕೊಂಡು ಬಂದಿದ್ದು, ರೋಮಾನ್ಸ್‌ನಲ್ಲಿ ತಲ್ಲೀನನಾಗಿದ್ದ. ಕೂಡಲೇ ಹಿಂದು ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಲಾಡ್ಜ್ ನ ದಾಖಲೆ ಪುಸ್ತಕ ಪರಿಶೀಲಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ  ಜೋಡಿಯ ಯಾವುದೇ ದಾಖಲೆಗಳನ್ನು ಪಡೆಯದೇ ಲಾಡ್ಜಿನ ಸಿಬ್ಬಂದಿ ರೂಂ ನೀಡಿರುವುದು ಕಂಡು ಬಂದಿದೆ.ಪೊಲೀಸರು ವಿಚಾರಣೆ ನಡೆಸಿ ಅನ್ಯಕೋಮಿನ ಜೋಡಿಯನ್ನು ಮನೆಗೆ ಕಳುಹಿಸಿದ್ದಾರೆ. ಈ ವೇಳೆ ಕೆಲಕಾಲ ಲಾಡ್ಜ್ ಬಳಿ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಲಾಡ್ಜ್ ನಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎನ್ನುವ ಹಿಂದೂಪರ ಸಂಘಟನೆಗಳ ಆರೋಪ ಈ ಕೃತ್ಯದ ಮೂಲಕ ನಿಜವಾಗಿದೆ. ಇನ್ನೊಂದೆಡೆ ಪುತ್ತೂರು ನಗರ ಠಾಣೆ ಪೊಲೀಸರು ಲಾಡ್ಜ್ ಸಿಬ್ಬಂದಿಗಳನ್ನು ಠಾಣೆಗೆ ಕರೆದೊಯ್ದ ವಿಚಾರಣೆ ನಡೆಸಿದ್ದಾರೆ.



Powered by Blogger.