".

Header Ads

ಪ್ರಜ್ವಲ್ ರೇವಣ್ಣ `ಪೆನ್ ಡ್ರೈವ್' ಅಶ್ಲೀಲ ವಿಡಿಯೋಗಳು ಅಸಲಿ : `FSL'ವರದಿಯಲ್ಲಿ ಬಹಿರಂಗ!

 


ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ‌ಹರಿದಾಡಿದ್ದ ವಿಡಿಯೊಗಳು ಅಸಲಿ ಎಂಬುದು ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್‌ಎಸ್‌ಎಲ್‌) ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಎಫ್​ಎಸ್​ಎಲ್​ ವರದಿ ಬಂದಿದ್ದು, ಆ ವಿಡಿಯೋ ನಕಲಿ ಅಲ್ಲ​ ಅಸಲಿ ಎಂದು ವರದಿಯಲ್ಲಿ ಬಹಿರಂಗವಾಗಿದೆ. ವಿಡಿಯೋಗಳು ಯಾವುದೇ ಅನಿಮೇಷನ್, ಗ್ರಾಫಿಕ್ಸ್, ಎಡಿಟ್​, ಮಾರ್ಫ್​ ಮಾಡಿದ್ದಲ್ಲ. ಅವು ಅಸಲಿ ವಿಡಿಯೋಗಳು ಎಂದು ಎಫ್​ಎಸ್​ಎಲ್​ ವರದಿಯಲ್ಲಿ ದೃಢಪಟ್ಟಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಆದರೆ, ಆ ವಿಡಿಯೋ ನಕಲಿ, ವಿರೋಧಿಗಳು ಎಡಿಟ್, ಮಾರ್ಫಿಂಗ್​ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಬಳಿಕ ಎಸ್​ಐಟಿ ವಿಡಿಯೋಗಳ ಅಸಲಿಯತ್ತು ತಿಳಿಯಲು ಎಫ್​ಎಸ್​ಎಲ್​ಗೆ ಕಳುಹಿಸಿತ್ತು. ಇದೀಗ ವಿಡಿಯೋಗಳ ಎಫ್​ಎಸ್​ಎಲ್​ ವರದಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಅಶ್ಲೀಲ ವಿಡಿಯೋ ಅಸಲಿ ಎಂಬುದು ಸಾಬೀತಾಗಿದೆ. ​​

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ದಾಖಲಾದ ಸಂದರ್ಭದಲ್ಲಿ ತನಿಖಾಧಿಕಾರಿಗಳು ಅಶ್ಲೀಲ ವಿಡಿಯೋಗಳನ್ನು ಜಪ್ತಿ ಮಾಡಿ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದು, ವಿಡಿಯೋಗಳು ನೈಜವಾಗಿವೆ. ಯಾವುದೇ ರೀತಿಯ ತಿರುಚುವಿಕೆ ನಡೆದಿಲ್ಲ ಎಂದು ವರದಿ ನೀಡಲಾಗಿದೆ.

Powered by Blogger.