".

Header Ads

ಉಡುಪಿ : ಮತ್ಸ್ಯಗಂಧ ಎಕ್ಸ್‌ಪ್ರೆಸ್‌ನಲ್ಲಿ ಕಳಪೆ ಎಲ್‌ಎಚ್‌ಬಿ ಕೋಚ್‌

 


ಮುಂಬಯಿ ಮತ್ತು ಮಂಗಳೂರು ನಡುವೆ ಕಳೆದ ಮೂರು ದಶಕಗಳಿಂದ ಸಂಚರಿಸುತ್ತಿರುವ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿಗೆ ಕಳೆದ ತಿಂಗಳು ಅಳವಡಿಸಿದ ಅತ್ಯಾಧುನಿಕ ಎಲ್‌ಎಚ್‌ಬಿ ಕೋಚ್‌ಗಳು ಕಳಪೆಯಾಗಿದ್ದು, ಅವುಗಳಲ್ಲಿರುವ ಲೋಪಗಳ ಕುರಿತು ಸಾರ್ವಜನಿಕರಿಂದ ಬಂದ ದೂರಿನ ಅನ್ವಯ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ಮಾಡಿ ಕೋಚ್‌ಗಳಲ್ಲಿರುವ ಲೋಪಗಳನ್ನು ತಕ್ಷಣ ಸರಿಪಡಿಸುವಂತೆ ಮನವಿ ಮಾಡಿದ್ದಾರೆ.

ಮತ್ಸ್ಯಗಂಧ ರೈಲಿಗೆ 2024ರಲ್ಲಿ ತಯಾರಾದ ಹೊಸ ಎಲ್‌ಎಚ್‌ಬಿ ಕೋಚ್‌ಗಳ ಜೊತೆಗೆ 2020ರಲ್ಲಿ ತಯಾರಾದ ಹಳೆಯ ಎಲ್‌ಎಚ್‌ಬಿ ಕೋಚ್‌ಗಳನ್ನು ಸೇರಿಸಿದ ಇಲಾಖೆಯ ಕಾರ್ಯವನ್ನು ಸಚಿವರ ಗಮನಕ್ಕೆ ತಂದು ಅವುಗಳನ್ನು ಕೂಡಲೇ ಬದಲಿಸುವಂತೆ ಆಗ್ರಹಿಸಿದ್ದಾರೆ.

ಮತ್ಸ್ಯಗಂಧ ರೈಲಿನ ಎಲ್ಲಾ ಟ್ರಿಪ್‌ಗಳಲ್ಲೂ ಯಾವುದೇ ದೂರುಗಳು ಬಾರದಂತೆ 2024ರಲ್ಲೇ ತಯಾರಾದ ಉತ್ತಮ ಕೋಚ್‌ಗಳನ್ನು ಬಳಸುವಂತೆ ಜೋನಲ್ ರೈಲ್ವೆಗಳಿಗೆ ತಿಳಿಸಲು ಕೋರಿದ್ದು, ಸಚಿವರಿಂದ ಈ ಬಗ್ಗೆ ಸಕಾರತ್ಮಕ ಪ್ರತಿಕ್ರಿಯೆ ಲಭಿಸಿದೆ ಎಂದು ಸಂಸದರು ತಿಳಿಸಿದ್ದಾರೆ. ಕರಾವಳಿ ಹಾಗೂ ಮುಂಬಯಿ ನಗರಗಳನ್ನು ಬೆಸೆಯುವ ಪ್ರತಿಷ್ಟಿತ ಮತ್ಸ್ಯಗಂಧ ರೈಲು ಎಲ್‌ಎಚ್‌ಬಿ ಕೋಚುಗಳೊಂದಿಗೆ ಕಳೆದ ಫೆ.17ರಿಂದ ಮೇಲ್ದರ್ಜೆಗೇರಿದ್ದು ಪ್ರಯಾಣಿಕರಿಗೆ ಸುರಕ್ಷಿತ ಪ್ರಯಾಣದ ಭರವಸೆ ನೀಡಿದೆ. ಮಂಗಳೂರು ಮುಂಬಯಿ ನಡುವೆ ಓಡುವ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿಗೆ ಉತ್ತಮ ಕೋಚುಗಳನ್ನಷ್ಟೇ ಜೋಡಿಸಲು ತಿಳಿಸಿದ್ದು, ಹಳೆಯ ಕೋಚುಗಳನ್ನು ಅಳವಡಿಸುವ ಪದ್ದತಿಗೆ ಮತ್ತು ಹೊಸ ಹಾಗು ಹಳೇ ಕೋಚುಗಳ ಮಿಶ್ರಣ ಮಾಡಿ ಓಡಿಸುವ ಪದ್ದತಿಯನ್ನು ಅನುಸರಿಸದಂತೆ ಸಚಿವರಿಗೆ ಸಂಸದರು ಮನವಿ ಮಾಡಿದ್ದಾರೆ.

Powered by Blogger.