ಮೃತ ವಿದ್ಯಾರ್ಥಿಯನ್ನು ವಂಶಿ ಜಿ ಶೆಟ್ಟಿ ಎಂದು ಗುರುತಿಸಲಾಗಿದೆ.
ಬಾಲಕ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತಕ್ಷಣ ಆತನನ್ನು ಮಹೇಶ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಘಟನೆಯ ಬಳಿಕ ಆಸ್ಪತ್ರೆಯ ಬಳಿ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಮಹೇಶ್ ಆಸ್ಪತ್ರೆ ಜಂಕ್ಷನ್ ಅಪಘಾತ ವಲಯವಾಗಿದ್ದು, ಇಲ್ಲಿ ಈ ಹಿಂದೆ ಹಲವು ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. ಈ ಜಂಕ್ಷನ್ನಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಶಾಶ್ವತ ಪರಿಹಾರವನ್ನು ಒದಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
Post a Comment