ಬಂಟ್ವಾಳ: ಗರ್ಭಿಣಿ ಪತ್ನಿಯನ್ನು ಕೊಲೆಗೈದು ಪತಿ ನೇಣು ಬಿಗಿದು ಆತ್ಮಹತ್ಯೆ
ಗರ್ಭಿಣಿ ಪತ್ನಿಯನ್ನು ಕೊಲೆಗೈದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ನಡೆದಿದೆ.ಬಡಗುಂಡಿ ನಿವಾಸಿ ತಿಮ್ಮಪ್ಪ ರಾಮ ಮೂಲ್ಯ (50) ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಅವರ ಪತ್ನಿ ಜಯಂತಿ (40) ಕೊಲೆಯಾದ ಮಹಿಳೆ.
ನಿನ್ನೆ ರಾತ್ರಿ ತಿಮ್ಮಪ್ಪ ರಾಮ ಮೂಲ್ಯ ತನ್ನ ಹೆಂಡತಿ ಜಯಂತಿ ಜತೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು, ಜಗಳ ವಿಕೋಪಕ್ಕೆ ತಿರುಗಿ ಜಯಂತಿ ಅವರಿಗೆ ಹಲ್ಲೆ ಮಾಡಿ, ಕತ್ತು ಹಿಚುಕಿ ಸಾಯಿಸಿರುತ್ತಾನೆ. ಬಳಿಕ ತಿಮ್ಮಪ್ಪ ಕೂಡಾ ಅಡುಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ.

Post a Comment