ಮೃತರನ್ನು ಶಿರ್ವ ಠಾಣೆಯ ಎಎಸ್‌ಐ ಸುದೇಶ್ ಶೆಟ್ಟಿ ಅವರ ಪುತ್ರಿ ಸ್ಪರ್ಶಾ (24) ಎಂದು ಗುರುತಿಸಲಾಗಿದೆ.
ಈಕೆ ಖಾಸಗಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದಳು. ಮೃತರ ತಾಯಿ (49) ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾನುವಾರ ರಾತ್ರಿ ಉಡುಪಿ -ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಾಕೇಶ್ ಅವರು ಕಾರನ್ನು ಕರಾವಳಿ ಕಡೆಯಿಂದ ಸಂತೆಕಟ್ಟೆ ಕಡೆಗೆ ವೇಗದಲ್ಲಿ ಚಲಾಯಿಸಿಕೊಂಡು ಬಂದು ಕರಾವಳಿ ಕಡೆಯಿಂದ ಸಂತೆಕಟ್ಟೆ ಕಡೆಗೆ ಆಗಮಿಸುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆಸಿದ್ದರು. ಪರಿಣಾಮ ಸ್ಕೂಟರ್‌ನಲ್ಲಿದ್ದ ಶರ್ಮಿಳಾ ಹಾಗೂ ಪುತ್ರಿ ಸ್ಪರ್ಶಾ ಅವರಿಗೆ ಗಾಯವಾಗಿದ್ದು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸ್ಪರ್ಶಾ ಅವರ ತಲೆಗೆ ಗಂಭೀರ ಗಾಯಗೊಂಡಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a Comment