ಹೃದಯಾಘಾತಕ್ಕೆ ಅಣ್ಣ – ತಮ್ಮ ಬಲಿ
ಹೃದಯಾಘಾತಕ್ಕೆ ಅಣ್ಣ – ತಮ್ಮ ಬಲಿ
ತಮ್ಮ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ಅಣ್ಣನೂ ಹೃದಯಾಘಾತಕ್ಕೆ ಬಲಿಯಾದ ಘಟನೆ ಗೋಕಾಕ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ನಡೆದಿದೆ.
ಸತೀಶ್ ಬಾಗನ್ನವರ(16) ಮತ್ತು ಬಸವರಾಜ ಬಾಗನ್ನವರ(24) ಮೃತ ಅಣ್ಣ ತಮ್ಮ. ಸತೀಶ್ ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಯಾಗಿದ್ದ. ಬಸವರಾಜ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಸತೀಶ್‌ಗೆ ಇಂದು(ಅ.04) ನಸುಕಿನ ಜಾವ 4 ಗಂಟೆಗೆ ಹೃದಯಾಘಾತವಾಗಿದೆ. ತಮ್ಮ ಬದುಕುಳಿಯುವುದು ಕಷ್ಟ ಎಂಬ ಸುದ್ದಿ ಕೇಳಿ ಅಣ್ಣ ಬಸವರಾಜ ಕುಸಿದು ಬಿದ್ದಿದ್ದಾನೆ. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸತೀಶ್ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.ಪತಿ ಹಾಗೂ ಮೈದುನನ ಸಾವಿನ ಸುದ್ದಿ ಕೇಳಿ ಬಸವರಾಜನ ಪತ್ನಿ ಪವಿತ್ರಾ(20) ಕುಸಿದುಬಿದ್ದಿದ್ದಾರೆ. ತುಂಬು ಗರ್ಭಿಣಿಯಾಗಿರುವ ಆಕೆಯನ್ನು ಗೋಕಾಕ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾರ್ಕಳ: ರಿಕ್ಷಾ ಚಲಾಯಿಸುತ್ತಿದ್ದ ವ್ಯಕ್ತಿ ಹೃದಯಾಘಾದಿಂದ ಮೃತ್ಯು
ಕಾರ್ಕಳ:- ಡಾ.ಟಿ ಎಂ ಎ ಪೈ ರೋಟರಿ ಆಸ್ಪತ್ರೆಯ ಬಳಿ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಕಸಬಾ ಗ್ರಾಮದ ತೆಳ್ಳಾರು ರಸ್ತೆಯ ನಿವಾಸಿ ಪ್ರಕಾಶ್ಚಂದ್ರ(55) ಮೃತಪಟ್ಟವರು.
ಪ್ರಕಾಶ್ಚಂದ್ರ ಅವರು ಸೆ.3 ರಂದು ಮಧ್ಯಾಹ್ನ ಅತ್ತೂರಿನಿಂದ ಕ್ರಿಯೇಟಿವ್ ಕಾಲೇಜಿನ ಕಡೆಗೆ ಬಾಡಿಗೆಗೆ ಹೋಗುತ್ತಿದ್ದಾಗ ಕಾರ್ಕಳ ಟಿ ಎಮ್ ಎ ಪೈ ಆಸ್ಪತ್ರೆಯ ಎದುರುಗಡೆ ರಸ್ತೆಯಲ್ಲಿ ಹೋಗುತ್ತಿರುವಾಗ ಎದೆನೋವು ಬಂದಿದ್ದು, ತಾನು ಚಲಾಯಿಸುತ್ತಿದ್ದ ರಿಕ್ಷಾವನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿ ಕುಸಿದು ಬಿದ್ದಿದ್ದರು.
ಕೂಡಲೇ ಅವರನ್ನು ಡಾ. ಟಿ ಎಂ ಎ ಪೈ ಆಸ್ಪತ್ರೆಗೆ ದಾಖಲಿಸಿದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a Comment