ಉಡುಪಿ: ಡಿ.2 ಮಂಗಳವಾರದಂದು "ಜೈ ಬಾಪು, ಜೈ ಸಂವಿಧಾನ ಸಮಾವೇಶ
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪ್ರಮುಖ ಅಂಗಸಂಸ್ಥೆಯಾದ ಕಾಂಗ್ರೆಸ್ ಪ್ರಚಾರ ಸಮಿತಿ ಉಡುಪಿ ಜಿಲ್ಲೆ ವತಿಯಿಂದ ಒಂದು ಮಹತ್ವದ ಹಾಗು ಅರ್ಥಪೂರ್ಣ ಜಿಲ್ಲಾ ಮಟ್ಟದ ಸಮಾವೇಶವನ್ನು ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಸನ್ಮಾನ್ಯ ವಿನಯ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ಅವರ ನೇತ್ರತ್ವದಲ್ಲಿ ಆಯೋಜಿಸಲಾಗಿದೆ. "ಜೈ ಬಾಪು, ಜೈ ಸಂವಿಧಾನ "ಎಂಬ ಘೋಷವಾಕ್ಯದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮವು ಡಿಸೆಂಬರ್ 2 ಮಂಗಳವಾರದಂದು ಉಡುಪಿಯ ಹೃದಯ ಭಾಗದಲ್ಲಿರುವ ಪುರ ಭವನ (ಟೌನ್ ಹಾಲ್) ನಲ್ಲಿ ಜರುಗಲಿದೆ.
ಬೆಳಿಗ್ಗೆ 10.30 ಗಂಟೆಗೆ ಸಮಾರಂಭವು ವಿದ್ಯುಕ್ತವಾಗಿ ಪ್ರಾರಂಭವಾಗಲಿದ್ದು ಜಿಲ್ಲೆಯ ಕಾಂಗ್ರೆಸ್ ಕುಟುಂಬದ ಎಲ್ಲಾ ನಾಯಕರು, ಸದಸ್ಯರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪರವಾಗಿ ಮನವಿ ಮಾಡುತ್ತೇನೆ . ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಸಮಾವೇಶವನ್ನು ಸಂಪೂರ್ಣ ಯಶಸ್ವಿಗೊಳಿಸುವಲ್ಲಿ ಸಹಕರಿಸಬೇಕು ಎಂದು ಪ್ರಚಾರ ಸಮಿತಿ ಆಶಿಸುತ್ತೇವೆ .
Post a Comment