ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನ ಏಷ್ಯಾ ಮುಖ್ಯಸ್ಥರಾದ ಡಾ. ಮನೀಶ್ ಕುಮಾರ್ ವಿಶ್ನೋಯ್ ಅವರು ಸಮಾರಂಭದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ ಅಧಿಕೃತ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.
ಈ ದಾಖಲೆ ನಿರ್ಮಿಸಿದ ಕಾರ್ಯಕ್ರಮವನ್ನು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನ ಪುರಸ್ಕೃತರಾದ ಯಶವಂತ್ ಎಂ.ಜಿ. ಅವರ ಮಾರ್ಗದರ್ಶನದಲ್ಲಿ ರೂಪಿಸಲಾಗಿತ್ತು. ಪುತ್ತಿಗೆ ಮಠದ ದಿವಾನರಾದ ನಾಗರಾಜ್ ಆಚಾರ್ಯ ಹಾಗೂ ಪ್ರಸನ್ನ ಆಚಾರ್ಯ ಅವರ ಮುಂದಾಳತ್ವದಲ್ಲಿ ಸಂಪೂರ್ಣ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಯೋಜಿಸಲಾಗಿತ್ತು.
ಒಂದೇ ಸಮಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೀತೆಯನ್ನು ಏಕಕಂಠದಲ್ಲಿ ಪಠಿಸಿ ಗೀತಾ ಪಾರಾಯಣ ಮಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗೀತೆಯ 15ನೇ ಪಾರಾಯಣವನ್ನು ಪಠಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಮತ್ತಷ್ಟು ಮಹತ್ವ ಬಂದಿತು.
ಈ ಕಾರ್ಯಕ್ರಮವು ಜಿಲ್ಲೆಯ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವದ ಹೆಮ್ಮೆಯ ಕ್ಷಣವಾಗಿದೆ.
Post a Comment