ಉಡುಪಿ :- ಯುವತಿ ಮೇಲೆ ಅತ್ಯಾಚಾರ - ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಆರೋಪಿ ಬಂಧನ
ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರ್ಜನ ಪ್ರದೇಶದಲ್ಲಿ ಯುವತಿಯೊಬ್ಬಳನ್ನು ಅಡ್ಡಗಟ್ಟಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪೆರ್ಡೂರು ನಾಯರ್ ಕೋಡಿನ ಪ್ರದೀಪ್ ಪೂಜಾರಿ (26) ಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಆರೋಪಿ ಪ್ರದೀಪ್ ಪೂಜಾರಿಯನ್ನು ಸಂತ್ರಸ್ತೆ ಯುವತಿ ಮದುವೆಗೆ ನಿರಾಕರಿಸಿದ್ದಳು. ಇದೇ ವಿಚಾರವಾಗಿ ಯುವತಿಯನ್ನು ಶನಿವಾರ ಅಡ್ಡಗಟ್ಟಿ ಅತ್ಯಾಚಾರಗೈದು ಕೊಲೆ ಬೆದರಿಕೆ ಹಾಕಿದ್ದಾನೆ.
ಸಂತ್ರಸ್ತ ಯುವತಿಗೆ ಕಿರುಕುಳ ನೀಡಿ ಹಿಂಬಾಲಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ವಿರುದ್ಧ ಯುವತಿ ಹಿರಿಯಡ್ಕ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಅದರಂತೆ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಆರೋಪಿ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಶನಿವಾರ ಸಂತ್ತಸ್ಥೆ ನಿರ್ಜನ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಂದು ಮದುವೆ ಆಗುವಂತೆ ಒತ್ತಾಯಿಸಿದ್ದ. ಇದಕ್ಕೆ ವಿರೋಧ ವ್ಯಕ್ತಪಡಿಸಿದಕ್ಕೆ ಆಕೆಯ ಕತ್ತು ಹಿಸುಕಿ ಬೆದರಿಸಿ ಅತ್ಯಾಚಾರ ಎಸಗಿದ್ದ. ಯುವತಿ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯನ್ನು ಹಾಡಿಯಲ್ಲಿ ಹಿಂಬಲಿಸಿ ಈ ಕೃತ್ಯ ಎಸಗಿದ್ದಾನೆ.
ಬಳಿಕ ಆಕೆ ಅಲ್ಲಿಂದ ತಪ್ಪಿಸಿಕೊಂಡು ಬಂದು ತನ್ನ ಮನೆಯವರಿಗೆ ಮಾಹಿತಿ ನೀಡಿದ್ದಾಳೆ. ಪೋಷಕರು ಯುವಕನ ವಿರುದ್ಧ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಪ್ರದೀಪ ಪೂಜಾರಿಯನ್ನು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Post a Comment