ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
10ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅದೇ ಶಾಲೆಯ ಬಸ್ ಚಾಲಕ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ಶಾಲೆ ಬಸ್ ಚಾಲಕ ತಲೆಮರಿಸಿಕೊಂಡಿದ್ದಾನೆ.
ನಿತ್ಯ ಬಸ್ನಲ್ಲಿರುವ ವಿದ್ಯಾರ್ಥಿನಿಗೆ ಚಾಕೋಲೆಟ್ ನೀಡಿ ಪುಸಲಾಯಿಸಿ ಆಕೆಯನ್ನು ಲೈಂಗಿಕವಾಗಿ ಬಳಿಸಿಕೊಂಡಿದ್ದಾನೆ. ಪರಿಣಾಮ ಇದೀಗ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ಎರಡು ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದಾಳೆ.
ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ ವಾಹನ ಚಾಲಕನಾಗಿದ್ದ ಚನ್ನರಾಯಪಟ್ಟಣ ತಾಲ್ಲೂಕಿನ ಬರಗೂರು ಗ್ರಾಮದ ರಂಜನ್ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದ್ದು, ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ವಿಚಾರ ತಿಳಿಯುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದಾನೆ.
Post a Comment