".

Header Ads

ಸಾಧುಗಳ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ 511 ಮುಸಲ್ಮಾನರ ಬಂಧನ

 


 ಉತ್ತರಾಖಂಡದಲ್ಲಿ 'ಆಪರೇಷನ್ ಕಾಲನೇಮಿ' ಎಂಬ ರಾಜ್ಯವ್ಯಾಪಿ ಅಭಿಯಾನದಡಿಯಲ್ಲಿ ದೊಡ್ಡ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ರಾಜ್ಯದ ೩ ಜಿಲ್ಲೆಗಳಲ್ಲಿ ನಡೆಸಲಾದ ಈ ವಿಶೇಷ ಕಾರ್ಯಾಚರಣೆಯ ಮೂಲಕ ಒಟ್ಟು ೫೧೧ ಜನರನ್ನು ಬಂಧಿಸಲಾಗಿದ್ದು, ಅವರಲ್ಲಿ ೧೯ ಬಾಂಗ್ಲಾದೇಶಿ ನುಸುಳುಕೋರರು ಸೇರಿದ್ದಾರೆ.

ಬಂಧಿತರ ಪೈಕಿ ೧೦ ಜನರನ್ನು ಮರಳಿ ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ. ಉಳಿದ ೯ ಜನರ ಮೇಲೆ ಕಾನೂನು ಕ್ರಮ ಜರುಗಿಸುವ ಪ್ರಕ್ರಿಯೆ ನಡೆಯುತ್ತಿದೆ. ಸಾಧುಗಳ ವೇಷ ಧರಿಸಿ ಮುಸಲ್ಮಾನರು ಭಿಕ್ಷೆ ಬೇಡುತ್ತಿರುವುದನ್ನು ಗಮನಿಸಿ ಈ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ.

ಜುಲೈ2025 ರಲ್ಲಿ ಈ ಅಭಿಯಾನವನ್ನು ಪ್ರಾರಂಭಿಸಲಾಯಿತು. ಅಧಿಕಾರಿಗಳ ಮಾಹಿತಿಯ ಪ್ರಕಾರ ಹರಿದ್ವಾರ, ಡೆಹ್ರಾಡೂನ್ ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳಲ್ಲಿ ಈ ಅಭಿಯಾನ ನಡೆಯುತ್ತಿದೆ. ಇದುವರೆಗೆ   500 ಕ್ಕೂ ಹೆಚ್ಚು ಜನರನ್ನು ತಪಾಸಣೆಗೆ ಒಳಪಡಿಸಲಾಗಿದೆ.

ಶ್ರದ್ಧೆಯ ಮುಖವಾಡ ಧರಿಸಿ ಧರ್ಮದ್ರೋಹಿ ಕೃತ್ಯಗಳನ್ನು ಸಹಿಸಲಾಗುವುದಿಲ್ಲ ! - ಮುಖ್ಯಮಂತ್ರಿ ಧಾಮಿಮುಖ್ಯಮಂತ್ರಿ ಪುಷ್ಕರ ಸಿಂಗ್ ಧಾಮಿ ಈ ಕುರಿತು ಮಾತನಾಡಿ, ಈ ಅಭಿಯಾನವು ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಸಂಬಂಧಿಸಿದ್ದಲ್ಲ. ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಹಾಗೂ ದೇವಭೂಮಿ ಉತ್ತರಾಖಂಡದ ಪ್ರತಿಷ್ಠೆಯನ್ನು ಕಾಪಾಡುವುದು ಈ ಅಭಿಯಾನದ ಉದ್ದೇಶವಾಗಿದೆ. ರಾಜ್ಯದಲ್ಲಿ ಶ್ರದ್ಧೆ ಮತ್ತು ನಂಬಿಕೆಯನ್ನು ಸಂಪೂರ್ಣವಾಗಿ ಗೌರವಿಸಲಾಗುವುದು; ಆದರೆ ಶ್ರದ್ಧೆಯ ಹೆಸರಿನಲ್ಲಿ ನಡೆಯುವ ಅಪರಾಧಗಳು, ಕಪಟ ಕೃತ್ಯಗಳು ಮತ್ತು ವಂಚನೆಯನ್ನು ಯಾವುದೇ ಪರಿಸ್ಥಿತಿಯಲ್ಲೂ ಸಹಿಸುವುದಿಲ್ಲ. ಈ ಅಭಿಯಾನವನ್ನು ಕಟ್ಟುನಿಟ್ಟಾಗಿ ಮತ್ತು ನಿಷ್ಪಕ್ಷಪಾತವಾಗಿ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.



Powered by Blogger.