".

Header Ads

8.69 ಸೆಕೆಂಡಿನಲ್ಲಿ 100 ಮೀಟರ್ ಅತೀ ವೇಗದ ಓಟ - ಶ್ರೀನಿವಾಸ ಗೌಡರ ದಾಖಲೆಯ ಮುರಿದ ಕಂಬಳ ಓಟಗಾರ ಸ್ವರೂಪ್

 


ಸಂಸದ ಕ್ಯಾ.ಬ್ರಿಜೇಶ್‌ ಚೌಟ ನೇತೃತ್ವದಲ್ಲಿ ನಗರದ ಬಂಗ್ರಕೂಳೂರಿನ ಗೋಲ್ಡ್‌ ಫಿಂಚ್‌ ಸಿಟಿಯಲ್ಲಿ ನಡೆದ ಕಂಬಳದಲ್ಲಿ ಅತೀ ವೇಗದ ಓಟ ದಾಖಳಾಗಿದ್ದು, ಈ ಹಿಂದಿನ ಕಂಬಳ ಓಟಗಾರ ಶ್ರೀನಿವಾಸ ಗೌಡರ ದಾಖಲೆಯನ್ನು ಸ್ವರೂಪ್ ಮುರಿದಿದ್ದಾರೆ. ರಾಮ ಲಕ್ಷ್ಮಣ ಜೋಡುಕರೆ ಕಂಬಳದ ನೇಗಿಲು ಹಿರಿಯ ವಿಭಾಗದ ಫೈನಲ್ ಸ್ಪರ್ಧೆಯಲ್ಲಿ 80 ಬಡಗಬೆಟ್ಟು ಕಲ್ಲಪಾಪು ಶ್ರೀಕಾ ಸಂದೀಪ್ ಶೆಟ್ಟಿ ಅವರ ಕೋಣಗಳ ಜೋಡಿ ಭಾನುವಾರ ಮುರಿದಿದೆ.ಸಂದೀಪ್ ಶೆಟ್ಟಿ ಮಾಲಿಕತ್ವದ ಗಾಂಧಿ ಮೈದಾನ ಸಂತು ಮತ್ತು ಸುರತ್ಕಲ್ ಪಾಂಚ ಕೋಣಗಳನ್ನು ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್‌ ಕುಮಾರ್ ಓಡಿಸಿದ್ದರು. ಆ ಕೋಣಗಳು 125 ಮೀ ಉದ್ದವನ್ನು 10.87 ಸೆಕೆಂಡ್‌ಗಳಲ್ಲಿ ಕ್ರಮಿಸಿದವು. ಅವು 100 ಮೀ ದೂರವನ್ನು 8.69 ಸೆಕೆಂಡ್‌ಗಳಲ್ಲಿ ಕ್ರಮಿಸಿದಂತಾಗಿದೆ.ಮಂಗಳೂರು ಕಂಬಳದ ಸೆಮಿಫೈನಲ್‌ನಲ್ಲಿ ಗಾಂಧಿ ಮೈದಾನ ಸಂತು ಮತ್ತು ಸುರತ್ಕಲ್ ಪಾಂಚ ಕೋಣಗಳ ಜೋಡಿ 125 ಮೀಟರ್ ದೂರವನ್ನು 11.06 ಸೆಕೆಂಡ್ ನಲ್ಲಿ ಕ್ರಮಿಸಿದ್ದು ಈ ಋತುವಿನ ಅತಿ ವೇಗದ ಓಟ ಎಂದು ದಾಖಲಾಗಿತ್ತು. ಫೈನಲ್‌ನಲ್ಲಿ ಅದೇ ಕೋಣಗಳು ಹಿಂದಿನ ಎಲ್ಲಾ ದಾಖಲೆಗಳನ್ನು ಅಳಿಸಿಹಾಕಿದವು.
ಕಂಬಳದ ಅತಿ ವೇಗದ ಓಟದ ದಾಖಲೆ ಈ ಹಿಂದೆ ಮಿಜಾರು ಅಶ್ವತ್ಥಪುರದ ಶ್ರೀನಿವಾಸ ಗೌಡ ಹೆಸರಿನಲ್ಲಿತ್ತು. 2021ರಲ್ಲಿ ಕಕ್ಯಪದವು ಕಂಬಳದಲ್ಲಿ ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಅವರ ಮಾಳ ಪುಟ್ಟ ಮತ್ತು ಮಿಜಾರ್ ಅಪ್ಪು ಕೋಣಗಳನ್ನು ಓಡಿಸಿದ್ದರು. ಆ ಕೋಣಗಳು 125 ಮೀಟರ್ ಅನ್ನು 10.95 ಸೆಕೆಂಡ್ ಗಳಲ್ಲಿ ಕ್ರಮಿಸಿದ್ದವು. ಅವು, 100 ಮೀ ದೂರವನ್ನು 8.76 ಸೆಕೆಂಡ್‌ಗಳಲ್ಲಿ ಕ್ರಮಿಸಿದ್ದವು.

ಮಂಗಳೂರು ಕಂಬಳ ಫಲಿತಾಂಶ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : 141 ಜತೆ
ಅಡ್ಡ ಹಲಗೆ – ಪ್ರಥಮ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ ಶೆಟ್ಟಿ “ಎ” (11.68) ಹಲಗೆ ಮುಟ್ಟಿದವರು- ತೆಕ್ಕಟ್ಟೆ ಸುಧೀರ್ ದೇವಾಡಿಗ
ದ್ವಿತೀಯ: ನಾರ್ಯಗುತ್ತು ಕುವೆತ್ತಬೈಲು ಸಂತೋಷ್ ರೈ ಬೊಳ್ಯಾರು (11.83) ಹಲಗೆ ಮುಟ್ಟಿದವರು- ಬೈಂದೂರು ಮಹೇಶ್ ಪೂಜಾರಿ
ಹಗ್ಗ ಹಿರಿಯ – ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (11.41)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ನಲ್ಲೂರು ಬಜಗೋಳಿ ಶಿವಪ್ರಸಾದ್ ನಿಲಯ ಪ್ರಾಣೇಶ್ ದಿನೇಶ್ ಭಂಡಾರಿ “ಎ” (11.50) ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ಹಗ್ಗ ಕಿರಿಯ- ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಬಿ” (11.41) ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ
ದ್ವಿತೀಯ: ಎರ್ಮಾಳ್ ಡಾ.ಚಿಂತನ್ ರೋಹಿತ್ ಹೆಗ್ಡೆ (11.62), ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ ಗೌಡ
ನೇಗಿಲು ಹಿರಿಯ – ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (10.87)
ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್
ದ್ವಿತೀಯ: ಮಂಗಳೂರು ಮರಕಡ ಬಾಯಾಡಿ ಮನೆ ಶಾಂತ ಸಂಜಯ್ ಶೆಟ್ಟಿ “ಎ” (11.44)
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ನೇಗಿಲು ಕಿರಿಯ – ಪ್ರಥಮ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಬಿ” (11.56)ಓಡಿಸಿದವರು: ಕಾವೂರುದೋಟ ಸುದರ್ಶನ್
ದ್ವಿತೀಯ: ಮುಲ್ಕಿ ಚಿತ್ರಾಪು ಸಾನದಮನೆ ಅಂಬಿಕಾ ರವೀಂದ್ರ ಪೂಜಾರಿ (11.74), ಓಡಿಸಿದವರು: ಬಾರಾಡಿ ನತೀಶ್ ಸಫಲಿಗ


Powered by Blogger.