".

Header Ads

ಸರ್ಕಾರಿ ಶಾಲೆಯ ಬಿಸಿ ಊಟದಲ್ಲಿ ಹುಳ ಪತ್ತೆ!

 


ಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿ ಊಟದಲ್ಲಿ ಹುಳಗಳು ಪತ್ತೆಯಾಗಿರುವ ಘಟನೆ ಕೊಪ್ಪಳ ತಾಲೂಕಿನ ಹಳೆ ನಿಂಗಾಪುರ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಮಕ್ಕಳಿಗೆ ಬಡಿಸಿದ ಊಟದಲ್ಲಿ ಹುಳಗಳನ್ನು ಕಂಡ ವಿದ್ಯಾರ್ಥಿಗಳು ಗಾಬರಿಗೊಂಡು ಶಾಲೆಯ ಸಿಬ್ಬಂದಿ ಮತ್ತು ಪೋಷಕರಿಗೆ ತಿಳಿಸಿದ್ದಾರೆ. ಈ ಘಟನೆಯಿಂದ ಪೋಷಕರು ಮತ್ತು ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ.

ಅಕ್ಷರ ದಾಸೋಹದ ಮೂಲಕ ವಿತರಿಸಲಾಗುವ ಅಕ್ಕಿಯನ್ನು ಬಿಸಿ ಊಟಕ್ಕೆ ಬಳಸಲಾಗುತ್ತಿದ್ದು, ಅವುಗಳನ್ನು ದೀರ್ಘಕಾಲದವರೆಗೆ ಸಂಗ್ರಹಿಸಿಡಲಾಗುರುತ್ತಿರುವುದು ಇದಕ್ಕೆ ಕಾರಣವಾಗಿದೆ ಎನ್ನಲಾಗಿದೆ.ಬಿಸಿ ಊಟಕ್ಕೆ ಬಳಸಲಾಗುವ ಅಕ್ಕಿಯ ಗುಣಮಟ್ಟವನ್ನು ಪರಿಶೀಲಿಸುತ್ತಿಲ್ಲ. ಸಿಬ್ಬಂದಿಯ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ಪೋಷಕರು ಶಾಲೆಯ ಬಳಿ ಜಮಾಯಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

Powered by Blogger.