ಗ್ಯಾಸ್ ಗೀಸರ್ ಸೋರಿಕೆ; ತಾಯಿ, ಮಗು ಸಾವು
ಗ್ಯಾಸ್ ಗೀಸರ್ ದುರಂತಗಳು ಹೆಚ್ಚಾಗಿದ್ದು, ಇದೀಗ ತಾಯಿ ಹಾಗೂ ಪುಟ್ಟ ಕಂದಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ಈ ದುರ್ಘಟನೆ ನಡೆದಿದೆ. 26 ವರ್ಷದ ಚಾಂದಿನಿ, 4 ವರ್ಷದ ಯುವಿ ಮೃತಪಟ್ಟವರು.
ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥರಾಗಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಪ್ರತಿದಿನ ದೊಡ್ಡ ಮಗಳನ್ನು ಶಾಲೆಯಿಂದ 4 ಗಂಟೆಗೆ ಕರೆದುಕೊಂಡು ಬರಲು ಚಾಂದಿನಿ ಹೋಗುತ್ತಿದ್ದರು. ಆದರೆ ಸೋಮವಾರ ಮಗಳನ್ನು ಕರೆದುಕೊಂಡು ಬರಲು ಶಾಲೆಗೆ ಹೋಗದ ಕಾರಣ ಶಾಲೆಯವರು ಚಾಂದಿನಿ ಪತಿ ಕಿರಣ್‌ಗೆ ಫೋನ್ ಮಾಡಿದ್ದರು. ಬಳಿಕ ಚಾಂದಿನಿಗೆ ಕರೆ ಮಾಡಿದರೆ ರಿಸೀವ್ ಮಾಡಿರಲಿಲ್ಲ. ಇದರಿಂದ ಕಿರಣ್ ತಮ್ಮನಿಗೆ ಕರೆ ಮಾಡಿ ನೋಡುವಂತೆ ತಿಳಿಸಿದ್ದರು.ಕಿರಣ್ ತಮ್ಮ ಪ್ರವೀಣ್ ಮನೆಗೆ ಬಂದು ನೋಡಿದಾಗ ಬಾತ್ ರೂಮ್‌ನಲ್ಲಿ ತಾಯಿ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡು ಬಂದಿದೆ. ಗ್ಯಾಸ್ ಗೀಸರ್ ಸೋರಿಕೆಯಿಂದ ದು*ರ್ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a Comment