ಉಡುಪಿ:- ವಿಧ್ಯಾರ್ಥಿ ಬೈಕ್ ಕದ್ದ ಕಳ್ಳ ಅರೆಸ್ಟ್ , ವಿಚಾರಿಸಿದ ವೇಳೆ ಹೊರಬಿತ್ತು ಮತ್ತಷ್ಟು ಕಳ್ಳತನದ ಕಥೆ
ವಿಧ್ಯಾರ್ಥಿಯೊಬ್ಬನ ಸ್ಕೂಟರ್ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಶಿರ್ವ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಯನ್ನು ವಿಚಾರಣೆ ನಡೆಸಿದಾಗ ಈತನೊಬ್ಬ ಅಂತರ್ ಜಿಲ್ಲಾ ಬೈಕ್ ಕಳ್ಳ ಎಂದು ಗೊತ್ತಾಗಿದೆ. ಬಂಧಿತನಿಂದ ಸುಮಾರು 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಬಂಧಿತ ಆರೋಪಿಯನ್ನು ಓಂ ಕೋಲಾರ ಎಂದು ಗುರುತಿಸಲಾಗಿದೆ. ಡಿಸೆಂಬರ್ 5 ರಂದು ವಿದ್ಯಾರ್ಥಿ ಕೌಶಿಕ್ ತನ್ನ ಹೊಂಡಾ ಆಕ್ಟಿವಾ ಸ್ಕೂಟರ್ ನ್ನು ಮಧ್ಯಾಹ್ನದ ಸಂದರ್ಭ ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಸ್ಕೂಟರ್ ಪಾರ್ಕ್ ಮಾಡಿದ್ದರು. ಊಟ ಮುಗಿಸಿ ವಾಪಸ್ ಬಂದಾಗ ಸ್ಕೂಟರ್ ಕಳವಾಗಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ್ದರು. ಉಡುಪಿ, ಮಲ್ಪೆ, ಕಾರ್ಕಳ ಹಾಗೂ ಧರ್ಮಸ್ಥಳ ಸೇರಿದಂತೆ ವಿವಿಧ ಭಾಗಗಳಲ್ಲಿ ಜಾಲ ಬೀಸಿದ್ದ ತಂಡವು ಕೊನೆಗೆ ಓಂ ಕೋಲಾರ ಎಂಬ ಆರೋಪಿಯನ್ನು ಬಂಧಿಸಿದೆ.

Post a Comment