Home
>
ಉಡುಪಿ
>
ಉಡುಪಿ: ಹೆಜಮಾಡಿ ಶ್ರೀಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವದಲ್ಲಿ ಸರ ಕಳ್ಳತನ ಪ್ರಕರಣ: ಮೂವರು ಆರೋಪಿಗಳ ಬಂಧನ
ಉಡುಪಿ: ಹೆಜಮಾಡಿ ಶ್ರೀಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವದಲ್ಲಿ ಸರ ಕಳ್ಳತನ ಪ್ರಕರಣ: ಮೂವರು ಆರೋಪಿಗಳ ಬಂಧನ
ಹೆಜಮಾಡಿಯ ಕಮಲ(78) ಎಂಬವರು ಡಿ.24ರಂದು ಮನೆಯ ಬಳಿಯ ಶ್ರೀಬ್ರಹ್ಮ ಬೈದರ್ಕಳ ಗರಡಿಯ ನೇಮೊತ್ಸಕ್ಕೆ ಹೋಗಿದ್ದರು. ದೈವದ ದರ್ಶನ ಮಾಡಿ ನಂತರ ಅಲ್ಲಿಗೆ ಬಂದ ತನ್ನ ಶಾರದಾ ಪೂಜಾರಿ ಎಂಬವರು ಕಮಲ ಅವರ ಕುತ್ತಿಗೆಯಲ್ಲಿ ಚಿನ್ನದ ಸರ ಇಲ್ಲದೆ ಇರುವ ಬಗ್ಗೆ ತಿಳಿಸಿದರು.
ಡಿ.25ರಂದು ಸಂಜೆ ದೇವಸ್ಥಾನದ ಆಡಳಿತ ಮಂಡಳಿಯವರು ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಮೂರು ಅಪರಿಚಿತ ಮಹಿಳೆಯರು ಕಮಲ ಅವರಿಗೆ ಸಹಾಯ ಮಾಡುವ ನೆಪದಲ್ಲಿ ಅವರ ಗಮನಕ್ಕೆ ಬಾರದೆ ಕುತ್ತಿಗೆಯಲ್ಲಿದ್ದ ಸುಮಾರು 3 ಪವನ್ ಚಿನ್ನದ ಸರವನ್ನು ಕಳವು ಮಾಡಿರುವುದು ಕಂಡುಬಂದಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅದರಂತೆ ತನಿಖೆ ನಡೆಸಿದ ಪೊಲೀಸರು, ಮೂವರು ಆರೋಪಿಗಳನ್ನು ಪುತ್ತೂರಿನಲ್ಲಿ ಬಂಧಿಸಿದ್ದಾರೆ. ಇವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು, ಹೆಚ್ಟಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Post a Comment