ಗಂಡನನ್ನು ಕೊಂದು ಪೀಸ್ ಪೀಸ್ ಮಾಡಿ ಚರಂಡಿಗೆ ಎಸೆದ ಪತ್ನಿ
ಉತ್ತರಪ್ರದೇಶದಲ್ಲಿ ಭೀಕರ ಕ್ರೈಂ ಒಂದು ನಡೆದಿದೆ. ತನ್ನ ಲವರ್ ಜೊತೆ ಮನೆಯಲ್ಲಿ ಸರಸವಾಡುತ್ತಿರುವ ವೇಳೆ ನೋಡಿದ ಗಂಡನನ್ನು ಕೊಲೆ ಮಾಡಿದ ಬಳಿಕ ಆತನ ದೇಹವನ್ನು ಪೀಸ್ ಪೀಸ್ ಮಾಡಿ ಚರಂಡಿಗೆ ಎಸೆದ ಘಟನೆ ನಡೆದಿದೆ.ನವೆಂಬರ್ 17 ರ ರಾತ್ರಿ ಚಂದೌಸಿಯಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ವ್ಯಕ್ತಿಯನ್ನು 32 ವರ್ಷದ ರಾಹುಲ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ರೂಬಿ ಮತ್ತು ಆಕೆಯ ಪ್ರಿಯಕ ಗೌರವ್ ಕೊಲೆ ಮಾಡಿದ ಆರೋಪಿಗಳು.ರಾಹುಲ್ ತನ್ನ ಪತ್ನಿ ರೂಬಿ ಮತ್ತು ಆಕೆಯ ಪ್ರಿಯಕರ ಗೌರವ್ ಕುಮಾರ್ ಅವರನ್ನು ಮನೆಯಲ್ಲಿ ಸರಸವಾಡುತ್ತಿರುವ ವೇಳೆ ನೋಡಿದ್ದಾನೆ, ಇದರಿಂದ ಸಿಟ್ಟಿಗೆದ್ದ ಆತನ ಪತ್ನಿ ರೂಬಿ ತನ್ನ ಗಂಡನ ಕೊಲೆ ಮಾಡಲು ಮುಂದಾಗಿದ್ದಾಳೆ. ಆರೋಪಿಗಳು ರಾಹುಲ್ ಗೆ ಕಬ್ಬಿಣದ ರಾಡ್ ನಿಂದ ಹೊಡೆದ ನಂತರ ಆತ ಮೃತಪಟ್ಟಿದ್ದಾನೆ. ನಂತರ ಅವರು ಕಟ್ಟಿಗ್ ಮೆಶಿನ್ ತಂದು ತಂದು ದೇಹವನ್ನು ತುಂಡುಗಳಾಗಿ ಕತ್ತರಿಸಿದ್ದು, ದೇಹದ ಒಂದು ಭಾಗವನ್ನು ಚರಂಡಿಗೆ ಎಸೆಯಲಾಗಿತ್ತು, ಉಳಿದ ಭಾಗಗಳನ್ನು ರಾಜ್‌ಘಾಟ್‌ಗೆ ತೆಗೆದುಕೊಂಡು ಹೋಗಿ ಗಂಗಾ ನದಿಗೆ ಬೀಸಾಕಿದ್ದಾರೆ.
ಪೊಲೀಸರ ಪ್ರಕಾರ, ಚಂದೌಸಿ ಪ್ರದೇಶದ ಮೊಹಲ್ಲಾ ಚುನ್ನಿ ನಿವಾಸಿ ರೂಬಿ ನವೆಂಬರ್ 18 ರಂದು ದೂರು ನೀಡಿದ್ದು, ತನ್ನ ಪತಿ ರಾಹುಲ್ (38) ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಕೆಲವು ದಿನಗಳ ನಂತರ, ಡಿಸೆಂಬರ್ 15 ರಂದು ಈದ್ಗಾ ಪ್ರದೇಶದ ಬಳಿಯ ಚರಂಡಿಯಿಂದ ವಿಕೃತ ರೀತಿಯ ಮೃತ ದೇಹವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಲೆ, ಕೈ ಮತ್ತು ಕಾಲು ಇಲ್ಲದ ಮೃತದೇಹ ಪತ್ತೆಯಾಗಿದೆ. ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಫೋರೆನ್ಸಿಕ್ ತಂಡವು ವಿವರವಾದ ಪರೀಕ್ಷೆಯನ್ನು ನಡೆಸಿದೆ. ಡಿಎನ್ಎ ಮಾದರಿಗಳನ್ನು ಸಂಗ್ರಹಿಸಲಾಯಿತು ಎಂದು ಎಸ್ಪಿ ಹೇಳಿದರು.
ತನಿಖೆಯ ವೇಳೆ, ದೇಹದ ಮೇಲೆ ರಾಹುಲ್ ಎಂದು ಬರೆದಿರುವುದು ಪೊಲೀಸರಿಗೆ ಗೊತ್ತಾಗಿದೆ. ಸಮೀಪದ ಪೊಲೀಸ್ ಠಾಣೆಗಳಲ್ಲಿ ಕಾಣೆಯಾದವರ ವರದಿ ಮತ್ತು ತಾಂತ್ರಿಕ ವಿಶ್ಲೇಷಣೆಯನ್ನು ಪರಿಶೀಲಿಸಿದಾಗ ರಾಹುಲ್ ಅವರ ಮೊಬೈಲ್ ಫೋನ್ ನವೆಂಬರ್ 18 ರಿಂದ ಸ್ವಿಚ್ ಆಫ್ ಆಗಿತ್ತು ಎಂದು ತಿಳಿದುಬಂದಿದೆ. ಹೆಚ್ಚಿನ ತನಿಖೆ ವೇಳೆ ರೂಬಿ ಕೊಲೆಯಲ್ಲಿ ಭಾಗಿಯಾಗಿರುವ ಶಂಕೆ ಪೊಲೀಸರಿಗೆ ವ್ಯಕ್ತವಾಯಿತು. ವಿಚಾರಣೆ ವೇಳೆ, ರಾಹುಲ್ ಅಕ್ರಮ ಸಂಬಂಧದಲ್ಲಿ ಸಿಕ್ಕಿಬಿದ್ದ ನಂತರ ಪ್ರಿಯಕರ ಗೌರವ್ ಸಹಾಯದಿಂದ ಪತಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಎಸ್ಪಿ ತಿಳಿಸಿದ್ದಾರೆ.
ಮೃತದೇಹವನ್ನು ಕತ್ತರಿಸಲು ಬಳಸಿದ ಗ್ರೈಂಡರ್, ಕಬ್ಬಿಣದ ರಾಡ್ ಮತ್ತು ಹಲ್ಲೆಗೆ ಬಳಸಿದ ಇತರ ಉಪಕರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೃತರ ಡಿಎನ್‌ಎ ಮಾದರಿಗಳನ್ನು ಸಹ ಸಂರಕ್ಷಿಸಲಾಗಿದೆ ಮತ್ತು ಖಚಿತವಾಗಿ ಗುರುತನ್ನು ಪತ್ತೆ ಹಚ್ಚಲು ಮತ್ತು ಪ್ರಕರಣವನ್ನು ಬಲಪಡಿಸಲು ಅವರ ಮಕ್ಕಳೊಂದಿಗೆ ಹೊಂದಿಸಲಾಗುವುದು. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Post a Comment