ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ, ಚಪ್ಪಲಿ ಹಾರಹಾಕಿ ಮೆರವಣಿಗೆ
ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಇಂದು (ಡಿ.10) ಶಾಲೆಯ ಬಳಿ ಸುತ್ತುವರೆದ ಜನರು, ಶಿಕ್ಷಕನಿಗೆ ಮನಬಂದಂತೆ ಥಳಿಸಿದ್ದಾರೆ. ಈ ವೇಳೆ ಇಡೀ ಗ್ರಾಮವೇ ನೋಡುವಂತೆ ಶಿಕ್ಷಕನ ಕೊರಳಿಗೆ ಚಪ್ಪಲಿ ಹಾರ ಹಾಕಿ ಶಾಲೆಯಿಂದ ಪೊಲೀಸ್ ಠಾಣೆವರೆಗೂ ಮೆರವಣಿಗೆ ಕರೆತಂದಿದ್ದಾರೆ.ಹಾವೇರಿಯ ಸವಣೂರು ಪಟ್ಟಣದ ಸರ್ಕಾರಿ ಉರ್ದು ಶಾಲೆಯ ಶಿಕ್ಷಕ ಹೀಗೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಆಕ್ರೋಶಗೊಂಡ ಪೋಷಕರು ಶಾಲೆಗೆ ತೆರಳಿ ಶಿಕ್ಷಕನಿಗೆ ಧರ್ಮದೇಟು ಕೊಟ್ಟಿದ್ದಾರೆ, ಬಳಿಕ ಶಿಕ್ಷಕನ ಕೊರಳಿಗೆ ಚಪ್ಪಲಿ ಹಾರ ಹಾಕಿ ರಸ್ತೆಯಲ್ಲಿ ಮೆರವಣಿಗೆ ಮಾಡಿ ಸವಣೂರು ಠಾಣೆಗೆ ಕರೆತಂದು ಪೊಲೀಸರಿಗೆ ಒಪ್ಪಿಸಿದ್ದಾರೆ.

Post a Comment