".

Header Ads

ಕುಂದಾಪುರ – ರಥಬೀದಿಯಲ್ಲಿರುವ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ – ಸುಟ್ಟು ಕರಕಲಾದ ಅಂಗಡಿಗಳು

 


ಕುಂದಾಪುರ ವೆಂಕಟರಮಣ ದೇವಸ್ಥಾನದ‌ ಸಮೀಪ ಕಟ್ಟಡದಲ್ಲಿ ಬೆಂಕಿ ಅವಘಢ ಸಂಭವಿಸಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.ಸೋಮವಾರ ಮುಂಜಾನೆ ನಡೆದ ಘಟನೆ ನಡೆದಿದ್ದು. ಕುಂದಾಪುರ ಪೇಟೆಯ ವೆಂಕಟರಮಣ ದೇವಸ್ಥಾನದ ಎದುರು ರಥಬೀದಿಯಲ್ಲಿರುವ ಅಂಗಡಿಗಳು ಸುಟ್ಟು ಭಸ್ಮವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಅಲ್ಲದೆ ಕಟ್ಟಡದಲ್ಲಿದ್ದ ಮೂರು ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿದೆ ಎನ್ನಲಾಗಿದೆ.ಕಟ್ಟಡದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡ ಮಾಹಿತಿ ಇದ್ದು, ಬಳಿಕ ಅದು ಪುಸ್ತಕದಂಗಡಿ ಸೇರಿದಂತೆ ಐರಾರು ಅಂಗಡಿಗಳಿಗೆ ವೇಗವಾಗಿ ಹಬ್ಬಿದೆ ಎನ್ನಲಾಗಿದೆ.



Powered by Blogger.