".

Header Ads

ಉಪ್ಪಿನಂಗಡಿ – ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ , ಇಬ್ಬರ ವಿರುದ್ದ ಪ್ರಕರಣ ದಾಖಲು

 ಅಪ್ರಾಪ್ತ ಬಾಲಕಿ ಕಿಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಆತ್ಮಹತ್ಯೆ ಮಾಡಿಕೊಳ್ಳಲು ಲೈಂಗಿಕ ಕಿರುಕುಳವೇ ಕಾರಣವೆಂಬುವುದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.

 ಬೆಳ್ತಂಗಡಿ ಮೂಲದ ಬಾಲಕಿ ಆತ್ಮಹತ್ಯೆ ಮಾಡಿಕೊಂಡವಳು. ಬಾಲಕಿ ನವೆಂಬರ್ 4 ರಂದು ತಲೆನೋವು ಎಂದು ಹೇಳಿ ಶಾಲೆಗೆ ಹೋಗದೆ ತನ್ನ ಮನೆಯಲ್ಲಿದ್ದಳು. ಈ ನಡುವೆ ಮನೆಯಲ್ಲಿ ತಂದಿಟ್ಟಿದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡಿದ್ದಳು. ಬಳಿಕ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 12ರಂದು ಮೃತಪಟ್ಟಿದ್ದಳು.

ಈ ಬಗ್ಗೆ ಕಡಬ ಪರಿಸರದ ರಾಜೇಶ್ ಎಂಬಾತ ಪೋನ್ ಮಾಡಿ ಕಿರುಕುಳ ನೀಡುತ್ತಿದ್ದ ಎಂದು ಮೃತರ ತಾಯಿ ಪೊಲೀಸರಿಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು, ಬಾಲಕಿಯ ಆತ್ಮಹತ್ಯೆಗೆ ಲೈಂಗಿಕ ಕಿರುಕುಳ ಕಾರಣ ಎಂಬುವುದನ್ನು ಪತ್ತೆ ಹಚ್ಚಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ಪ್ರಧಾನ ಆರೋಪಿಯು ಅಪ್ರಾಪ್ತ ವಯಸ್ಕನಾಗಿದ್ದು, ಆತನೊಂದಿಗೆ ಕಿರುಕುಳಕ್ಕೆ ಸಹಕರಿಸಿದ ಪ್ರಶಾಂತ (21) ಎಂಬಾತನ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Powered by Blogger.