".

Header Ads

ಪ್ರೇಮಿಗಳಿಗೆ ಸಹಕರಿಸಿದ್ದಕ್ಕೆ ನಡೆಯಿತು ಡಬಲ್‌ ಮರ್ಡರ್‌!


 ಪ್ರೇಮಿಗಳನ್ನು ಬೆಂಬಲಿಸಿದರೆಂಬ ಕಾರಣಕ್ಕೆ ಇಬ್ಬರನ್ನು ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜೈ ಭೀಮ್ ನಗರದಲ್ಲಿ ನಡೆದಿದೆ.ಕಿರಣ್‌ (25) ಮಂಜುನಾಥ್ (45) ಹತ್ಯೆಯಾದ ಯುವಕರು. 2 ದಿನದ ಹಿಂದೆ ಮನೆ ತೊರೆದಿದ್ದ ಪ್ರೇಮಿಗಳು ಶುಕ್ರವಾರ ಸಂಜೆ ಹಳೆ ಪೊಲೀಸ್ ಠಾಣೆಗೆ ಬಂದಿದ್ದರು.ಈ ವೇಳೆ ಯುವತಿ ಪ್ರಿಯಕರನೊಂದಿಗೆ ಹೋಗುವುದಾಗಿ ಹೇಳಿದ್ದಾಳೆ. ಇದು ಯುವತಿಯ ಮನೆಯವರ ಸಿಟ್ಟಿಗೆ ಕಾರಣವಾಗಿದೆ. ಈ ಜೋಡಿಗೆ ಮನೆ ಬಿಟ್ಟು ಹೋಗಲು ಸಹಕರಿಸಿದ್ದರು ಎಂದು ಆರೋಪಿಸಿ ಯುವತಿಯ ಸಹೋದರ ಹಾಗೂ ಆತನ ಸ್ನೇಹಿತರು ನಂದೀಶ್ ಸ್ನೇಹಿತ ಕಿರಣ್ ಜೊತೆ ಜಗಳವಾಡಿದ್ದಾರೆ.

ಈ ವೇಳೆ ಕಿರಣ್ ಗೆ ಚಾಕು ಇರಿಯಲಾಗಿದ್ದು, ತೀವ್ರ ಗಾಯಗೊಂಡ ಕಿರಣ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಜಗಳ ಬಿಡಿಸಲು ಬಂದ ಸ್ಥಳೀಯರಾದ ಮಂಜುನಾಥ ಅವರಿಗೂ ಚಾಕು ಇರಿಯಲಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

Powered by Blogger.