".

Header Ads

ಅನಧಿಕೃತ ಬುದ್ಧಿಮಾಂದ್ಯ ಶಾಲೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಹಲ್ಲೆ: ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು

 


ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ ಶಿಕ್ಷಕ ದಂಪತಿ ಬುದ್ಧಿಮಾಂದ್ಯನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ವೀಡಿಯೋ ವೈರಲ್ ಆದ ಬೆನ್ನಲ್ಲೇ ಘಟನೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಮುಧೋಳ ತಾಲೂಕಿನ ಮಂಟೂರು ಗ್ರಾಮದ 16 ವರ್ಷದ ಬಾಲಕ ಹಲ್ಲೆಗೊಳಗಾದ ಬುದ್ಧಿಮಾಂದ್ಯ. ಅನಧಿಕೃತ ಶಾಲೆಯ ಮುಖ್ಯಶಿಕ್ಷಕ ಅಕ್ಷಯ ಇಂದುಲ್ಕರ್ ಹಾಗೂ ಶಿಕ್ಷಕಿ ಮಾಲಿನಿ ದಂಪತಿ ಬಾಲಕನ ಕಣ್ಣಿಗೆ ಕಾರದಪುಡಿ ಎರಚಿ, ಬೆಲ್ಟ್ ಮತ್ತು ಪ್ಲಾಸ್ಟಿಕ್ ಪೈಪ್‌ನಿಂದ ಮನಬಂದಂತೆ ಹಲ್ಲೆ ನಡೆಸಿದ್ದು, ಆತ ನೆಲಕ್ಕೆ ಬಿದ್ದು ಹೊರಳಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಘಟನೆ ಬೆನ್ನಲ್ಲೇ ಶಿಕ್ಷಕರ ವಿರುದ್ಧ ಪಾಲಕರು ತೀವ್ರ ಆಕ್ರೋಶ ಹೊರಹಾಕಿದ್ದು, ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಎಫ್ಐಆರ್‌ ದಾಖಲಿಸಿಕೊಂಡ ನವನಗರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದು, ಹಲ್ಲೆಕೋರ ಪತಿ-ಪತ್ನಿಯನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.

ಶಿಕ್ಷಕರು ನನ್ನ ಮಗನ ಮೇಲೆ ಹಲ್ಲೆ ನಡೆಸುವುದನ್ನು ನೋಡಿ ಆಘಾತವಾಯಿತು. ಮಕ್ಕಳ ಸುರಕ್ಷತೆಗಾಗಿ ಸರ್ಕಾರ ಕೂಡಲೇ ಶಾಲೆಯನ್ನು ಬಂದ್ ಮಾಡಬೇಕೆಂದು ಬಾಲಕನ ತಾಯಿ ಪಾರ್ವತಿ ರಾಥೋಡ್ ಅವರು ಮನವಿ ಮಾಡಿದ್ದಾರೆ.

Powered by Blogger.