".

Header Ads

ಅತ್ತೂರು ಸಂತ ಲಾರೆನ್ಸ್‌ ಪುಣ್ಯಕ್ಷೇತ್ರ: ಜ. 25-29: ಬಸಿಲಿಕಾದ ವಾರ್ಷಿಕ ಮಹೋತ್ಸವ

 


ಅತ್ತೂರು ಸಂತ ಲಾರೆನ್ಸ್‌ ಪುಣ್ಯಕ್ಷೇತ್ರ ಬಸಿಲಿಕಾದ ವಾರ್ಷಿಕ ಮಹೋತ್ಸವ ಜ.25ರಿಂದ ಜ. 29ರ ವರೆಗೆ ನಡೆಯಲಿದೆ ಎಂದು ಬಸಿಲಿಕಾದ ಧರ್ಮಗುರು ವಂ| ಅಲ್ಬನ್‌ ಡಿ'ಸೋಜಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮಹೋತ್ಸವದ ಪೂರ್ವಭಾವಿಯಾಗಿ ಜ.16ರಿಂದ ಜ.24ರ ವರೆಗೆ ಒಂಬತ್ತು ದಿನಗಳ ಕಾಲ ನವದಿನಗಳ ಪ್ರಾರ್ಥನೆ (ನೊವೆನಾ) ಆಯೋಜಿಸಲಾಗಿದೆ. ಈ ವರ್ಷ ಮಹೋತ್ಸವದ ಧ್ಯೇಯವಾಕ್ಯವಾಗಿ "ನಾನು ನಿನ್ನನ್ನು ಪ್ರೀತಿಸುತ್ತಿದ್ದೇನೆ' ಎಂಬ ಸಂದೇಶವನ್ನು ಆಯ್ಕೆ ಮಾಡಲಾಗಿದೆ ಎಂದವರು ವಿವರಿಸಿದರು.

ಮಹೋತ್ಸವದ ಪ್ರಮುಖ ದಿನಗಳಲ್ಲಿ ವಿವಿಧ ಧರ್ಮಾಧ್ಯಕ್ಷರು ಹಾಗೂ ಧರ್ಮಗುರುಗಳು ಭಾಗವಹಿಸಲಿದ್ದಾರೆ. ಜ. 25ರಂದು ಉಡುಪಿ ಧರ್ಮಪ್ರಾಂತ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್‌ ಐಸಾಕ್‌ ಲೋಬೊ, ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ರೈ| ರೆ| ಡಾ| ಲುವಿಸ್‌ ಪಾವ್‌ ಡಿ'ಸೋಜಾ ಅವರ ಉಪಸ್ಥಿತಿಯಲ್ಲಿ ಬಲಿಪೂಜೆ ನಡೆಯಲಿದೆ.

ಜ. 26ರಂದು ಕಾರವಾರದ ಧರ್ಮಾಧ್ಯಕ್ಷ ರೈ| ರೆ| ಡಾ| ದುಮಿಂಗ್‌ ಡಾಯಸ್‌, ಜ. 27ರಂದು ಅಲಹಾಬಾದ್‌ನ ಧರ್ಮಾಧ್ಯಕ್ಷ ರೈ| ರೆ| ಡಾ| ಲುವಿಸ್‌ ಮಸ್ಕರೇನಸ್‌, ಜ.28ರಂದು ಅಜ್ಮಿàರ್‌ನ ಧರ್ಮಾಧ್ಯಕ್ಷ ರೈ| ರೆ| ಡಾ| ಜೋನ್‌ ಕರ್ವಾಲ್ಲೊ, ಜ. 29ರಂದು ಮಂಗಳೂರು ಧರ್ಮಾಧ್ಯಕ್ಷ ರೈ| ರೆ| ಡಾ| ಪೀಟರ್‌ಪಾವ್‌ ಸಲ್ದಾನ್ಹಾ ಅವರು ಬಲಿಪೂಜೆ ಕಾರ್ಯ ಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

Powered by Blogger.