ರಾಜ್ಯದಲ್ಲಿನ 800 ಸರ್ಕಾರಿ ಶಾಲೆಗಳನ್ನು KPS ಶಾಲೆಗಳಾಗಿ ಮೇಲ್ದರ್ಜೆಗೆ : ರಾಜ್ಯ ಸರ್ಕಾರ ಆದೇಶ
ರಾಜ್ಯದಲ್ಲಿನ 800 ಸರ್ಕಾರಿ ಶಾಲೆಗಳನ್ನು ADB, KKRDB ನಿಧಿ ಹಾಗೂ CEPMIZ ತಾಲ್ಲೂಕುಗಳಲ್ಲಿನ KMERC ನಿಧಿಗಳ ಸಹಾಯದಿಂದ ಕೆ.ಪಿ.ಎಸ್. ಮಾನದಂಡಗಳ ಕೈಪಿಡಿಯಂತೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ (KPS) ಉನ್ನತೀಕರಿಸಲು ವಿಸ್ತ್ರತ ಯೋಜನಾ ವರದಿ ತಯಾರಿಸಲು ಸಂಸ್ಥೆಯನ್ನು ಆಯ್ಕೆ ಮಾಡಲು ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಾಥಮಿಕ ಶಿಕ್ಷಣದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟ ಶಿಕ್ಷಣ ನೀಡಲು ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ.
ಏಷಿಯನ್ ಡೆವಲೆಪ್ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು, ಇದರ ಜೊತೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಕ್ಷರ ಅವಿಷ್ಕಾರ ಯೋಜನೆ ಅಡಿ ರೂ.200 ಕೋಟಿ ವೆಚ್ಚದಲ್ಲಿ ಆಯ್ದ 50 ಶಾಲೆಗಳನ್ನು ಸುಸಜ್ಜಿತ ಕೆ.ಪಿ.ಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Post a Comment