ಕಾರ್ಕಳ :-ಪರುಶುರಾಮ ಥೀಮ್ ಪಾರ್ಕ್ ಮೇಲ್ಚಾವಣಿ ಕದ್ದವರು ಕಾಂಗ್ರೆಸ್ನ ಬ್ರದರ್ಸ್: ಶಾಸಕ ಸುನಿಲ್ ಕುಮಾರ್
ಕಾರ್ಕಳ ಪರುಶುರಾಮ ಥೀಮ್ ಪಾರ್ಕ್ ನ ತಾಮ್ರದ ಶೀಟ್ ಗಳನ್ನು ಕದ್ದ ಕಳ್ಳರನ್ನು ಉಡುಪಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.‘ಪರಶುರಾಮ ಥೀಂ ಪಾರ್ಕ್ ಮೇಲ್ಚಾವಣಿ ಕದ್ದವರು ಕಾಂಗ್ರೆಸ್ನ ಬ್ರದರ್ಸ್..! ಥೀಂಪಾರ್ಕ್ ಪಾಳು ಬೀಳುವಂತೆ ಮಾಡಿದ್ದು ಕಾಂಗ್ರೆಸ್. ಕಳೆದ ವಾರ ಥೀಂ ಪಾರ್ಕ್ನಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣ ಭೇದಿಸಿದ ಸ್ಥಳೀಯ ಪೊಲೀಸರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದಿದ್ದಾರೆ.‘ಭಾರತದ ಶ್ರದ್ಧಾ ಕೇಂದ್ರಗಳನ್ನು ಘಜ್ನಿ, ಘೋರಿ, ಖಿಲ್ಜಿ, ಮೊಘಲರು ಒಡೆದರೆ ಥೀಂ ಪಾರ್ಕ್ನ ಮೇಲ್ಚಾವಣಿ ಕದ್ದವರು ಅವರ ವಂಶಸ್ಥರು. ಕಾರ್ಕಳ ಕಾಂಗ್ರೆಸ್ ಮಖಂಡರು ಈಗ ಏನೆನ್ನುತ್ತಾರೆ? ಪರಶುರಾಮ ಸೃಷ್ಟಿ ಎಂದು ಹೆಸರಾದ ಕರಾವಳಿಯಲ್ಲಿ ಪರಶುರಾಮನ ಹೆಜ್ಜೆಗುರುತುಗಳು ಇರಬಾರದು ಎಂದು ಥೀಂ ಪಾರ್ಕ್ ಕಾಮಗಾರಿಯನ್ನು ನೀವು ಅರ್ಧಕ್ಕೆ ನಿಲ್ಲಿಸಿದ್ದಿರಿ’ ಎಂದು ವಾಗ್ದಾಳಿ ಮಾಡಿದ್ದಾರೆ.
‘ಹಿಂದು ಭಾವನೆಗಳಿಗೆ ಘಾಸಿ ಮಾಡಿರುವ ಜತೆಗೆ ಪ್ರವಾಸೋದ್ಯಮಕ್ಕೆ ಅಡ್ಡಿ ಮಾಡಿದ ನಿಮ್ಮ ತಪ್ಪು ಮುಂದಿನ ಚುನಾವಣೆಯವರೆಗಲ್ಲ, ಶತಶತಮಾನಗಳವರೆಗೂ ಸ್ಥಾಯಿಯಾಗಿರುತ್ತದೆ. ಇಲ್ಲಿಂದಲೇ ಕಾಂಗ್ರೆಸ್ ಅಧಃಪತನದ ಕ್ಷಣಗಣನೆ ಪ್ರಾರಂಭ’ ಎಂದು ಶಾಸಕ ಸುನಿಲ್ ಕುಮಾರ್ ಕಿಡಿಕಾರಿದ್ದಾರೆ.
ಪ್ರಕರಣ:- ಕಾರ್ಕಳದ ಉಮಿಕಲ್ ಬೆಟ್ಟದ ಮೇಲಿರುವ ಪರಶುರಾಮ ಥೀಮ್ ಪಾರ್ಕ್ ತಾಮ್ರ ಹೊದಿಕೆ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ .ಬಂಧಿತರನ್ನು ಮಂಗಳೂರು ಮೂಲದ ಆರಿಫ್(37) ಮತ್ತು ಅಬ್ದುಲ್ ಹಮೀದ್(32) ಎಂದು ಗುರುತಿಸಲಾಗಿದೆ. ಬಂಧಿತರಿಂದ 45 ಸಾವಿರ ರೂ. ಮೌಲ್ಯದ 51 ಕೆಜಿ ತಾಮ್ರದ ಹೊದಿಕೆ, ಎರಡು ಸೀಲಿಂಗ್ ಫ್ಯಾನ್, ಕೃತ್ಯಕ್ಕೆ ಬಳಸಿದ ಗೂಡ್ಸ್ ಆಟೋ, ಬೈಕ್ ವಶಕ್ಕೆ ಪಡೆಯಲಾಗಿದ್ದು, ಇತರೆ ಆರೋಪಿಗಳ ಪತ್ತೆಗೆ ಪೊಲೀಸರಿಂದ ಶೋಧ ಮುಂದುವರಿದಿದೆ.
ಜನವರಿ 3ರಂದು ಘಟನೆ ನಡೆದಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು 3 ತಂಡ ರಚಿಸಿ ತನಿಖೆ ನಡೆಸಿದ್ದರು. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೋಧ ಕಾರ್ಯ ನಡೆಸಿ ಇದೀಗ ಇಬ್ಬರನ್ನು ಬಂಧಿಸಿದ್ದಾರೆ.


Post a Comment