ಬೆಳ್ತಂಗಡಿ :ವಿದ್ಯಾರ್ಥಿ ನಿಗೂಢ ಸಾವು ಪ್ರಕರಣ: ತಲೆ ಮೇಲೆ ಚೂಪಾದ ಆಯುಧಗಳಿಂದ ಉಂಟಾದ ಗಾಯ , ತನಿಖೆಗೆ ನಾಲ್ಕು ತಂಡ ರಚನೆ
ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15) ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಈ ವೇಳೆ ಬಾಲಕನ ತಲೆಗೆ ಬಲವಾದ ಪೆಟ್ಟು ಬಿದ್ದಿರುವ ಗುರುತು ಕಂಡುಬಂದಿರುವುದಾಗಿ ತಿಳಿದು ಬಂದಿದೆ. ಕತ್ತಿ ಮತ್ತು ಟಾರ್ಚ್ ಲೈಟ್ ಪತ್ತೆಯಾಗಿದೆ ಎಂದು ತಿಳಿದು ಬಂದಿರುವ ಕುರಿತು ವರದಿಯಾಗಿದೆ. ಸುಮಂತ್ ಸಾವಿನ ಕುರಿತು ಪ್ರಾಥಮಿಕ ವರದಿ ಬಂದಿದ್ದು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣದ ಸಮಗ್ರ ತನಿಖೆ ಆರಂಭಿಸಿದ್ದಾರೆ.



Post a Comment