ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ ಪಿಯು ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕಾಗುತ್ತದೆ. ಈವರೆಗೆ ಪೂರ್ವಸಿದ್ಧತಾ ಪರೀಕ್ಷೆ ಮುಗಿದ ಬಳಿಕ ಸುಮಾರು ಒಂದು ತಿಂಗಳ ಕಾಲ ವಿದ್ಯಾರ್ಥಿಗಳಿಗೆ ಸ್ಟಡಿ ಹಾಲಿಡೇ ನೀಡಲಾಗುತ್ತಿತ್ತು. ಆದರೆ ಈ ವ್ಯವಸ್ಥೆಯಿಂದ ನಿರೀಕ್ಷಿತ ಫಲಿತಾಂಶ ಸಿಗುತ್ತಿಲ್ಲ ಎಂಬ ಕಾರಣದಿಂದ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ.
ಫೆಬ್ರವರಿ 26ರವರೆಗೆ ಕಾಲೇಜುಗಳನ್ನು ನಡೆಸಲು ಇಲಾಖೆ ನಿರ್ಧರಿಸಿದ್ದು, ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ಉಪಾನ್ಯಾಸಕರ ನೇತೃತ್ವದಲ್ಲಿಯೇ ಮುಖ್ಯ ಪರೀಕ್ಷೆಗೆ ಸಿದ್ಧಪಡಿಸುವಂತೆ ಸೂಚನೆ ನೀಡಲಾಗಿದೆ.
ಉಪನ್ಯಾಸಕರ ನೇತೃತ್ವದಲ್ಲಿ ಗ್ರೂಪ್ ಸ್ಟಡಿ ವ್ಯವಸ್ಥೆ ಜಾರಿಗೊಳಿಸಲು ಇಲಾಖೆ ಮುಂದಾಗಿದೆ. ಪಠ್ಯ ಪುನರವಲೋಕನ, ಅನುಮಾನ ನಿವಾರಣೆ, ಪ್ರಶ್ನೋತ್ತರ ಚರ್ಚೆಗಳ ಮೂಲಕ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಬೇಕು ಎಂದು ಕಾಲೇಜುಗಳಿಗೆ ಸೂಚಿಸಲಾಗಿದೆ. ಜೊತೆಗೆ ಉಪನ್ಯಾಸಕರು ಕೂಡ ಪರೀಕ್ಷೆ ಮುಗಿಯುವವರೆಗೂ ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕು ಎಂದು ಆದೇಶಿಸಲಾಗಿದೆ.
Post a Comment