ಕಾಪು : ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ – ಸವಾರ ಸಾವು
ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಮಧ್ಯಾಹ್ನ ವೇಳೆ ನಡೆದಿದೆ.ಮೃತರನ್ನು ಮಲ್ಪೆ ಪಡುಕೆರೆ ಮೂಲದ ಕಾಪು ಮೂಳೂರು ನಿವಾಸಿ ಕೃಷ್ಣರಾಜ ಎಸ್.ಕರ್ಕೇರ(50) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆ ಬರುತ್ತಿದ್ದ ಖಾಸಗಿ ಬಸ್, ಎದುರಿನಲ್ಲಿ ಹೋಗುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.ಇದರಿಂದ ರಸ್ತೆಗೆ ಬಿದ್ದು ಗಾಯಗೊಂಡ ಸವಾರ ಕೃಷ್ಣರಾಜ ಕರ್ಕೇರ ಅವರನ್ನು ಕೂಡಲೇ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು, ಆದರೆ ಗಂಭೀರ ಸ್ಥಿತಿಯಲ್ಲಿದ್ದ ಕೃಷ್ಣರಾಜ ಕರ್ಕೇರ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Post a Comment