".

Header Ads

ಹೊನ್ನಾವರ:ಕಾರು ಸಹಿತ ಇಬ್ಬರ ದಹನ..!!

 


ಹೊನ್ನಾವರ ಗೇರುಸೊಪ್ಪ ಬಳಿ ಕಾರು ಸಹಿತ ಇಬ್ಬರ ದಹನವಾದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

ಗೇರುಸೊಪ್ಪ ಸೂಳೆಮುರ್ಕಿ ಕ್ರಾಸ್ ಬಳಿ ಕಾರ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿರಬೇಕು ಎಂದು ಶಂಕಿಸಲಾಗಿದೆ .ಕಾರ್ ನಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ. ಕಾರ್ ನಂಬರ್ ಪ್ಲೇಟ್ ಸಹ ಸುಟ್ಟು ಹೋಗಿದ್ದು, ಎಲ್ಲಿಯ ಕಾರ್? ಅದರಲ್ಲಿ ಇದ್ದವರು ಯಾರು ಎಂದು ಗುರುತಿಸುವುದು ಕಷ್ಟವಾಗುತ್ತಿದೆ. ಕಾರ್ ಸೂಳೆ ಮುರ್ಕಿ ಕ್ರಾಸ್ ಬಳಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಹೊನ್ನಾವರ ಪೊಲೀಸರು ಸ್ಥಳಕ್ಕೆ ಧಾವಿಸಿ, ತನಿಖೆ ಆರಂಭಿಸಿದ್ದಾರೆ.ಹೊನ್ನಾವರ ತಾಲೂಕಿನ ಗೇರುಸೊಪ್ಪ ಸೂಳೆಮುರ್ಕಿ ಕ್ರಾಸ್ ಅಪಘಾತ ವಲಯವಾಗಿದ್ದು, ಬಸ್ ಪಲ್ಟಿ, ಮಿನಿ ಬಸ್ ಪಲ್ಟಿ ಯಾಗುವುದು ಹೆಚ್ಚು. ಈ ತಿರುವನ್ನು ಸರಿಪಡಿಸುವ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ಯಾವಾಗ ಮಾಡುತ್ತದೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

Powered by Blogger.