ಉಡುಪಿ : ತ್ಯಾಜ್ಯ ಸಂಸ್ಕರಣಾ ಘಟಕ ಉದ್ಘಾಟನೆ
ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣಮಠದಲ್ಲಿ ಗೀತಾ ಮಂದಿರದ ಹತ್ತಿರ ತ್ಯಾಜ್ಯ ಸಂಸ್ಕರಣಾ ಘಟಕವನ್ನು ವಿಧಾನಸಭಾ ಅಧ್ಯಕ್ಷರಾದ ಶ್ರೀ ಯು.ಟಿ. ಖಾದರ್ ಉದ್ಘಾಟನೆ ಮಾಡಿದರು
ನಂತರ, ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀಪಾದರು ಸನ್ಮಾನಿಸಿ ಗೌರವಿಸಿದರು
ಈ ಸಂದರ್ಭದಲ್ಲಿ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಅನುಗ್ರಹಿಸಿದರು. ವಿವಿಧ ಕ್ಷೇತ್ರದ ಪ್ರಮುಖರಾದ ನಾರಾಯಣ ಬೆಳ್ಳಿರಾಯ, ಭಾರತಿ ಅಜಯ ಪಾಟಂಕರ್, ಸೇತು ಮಾಧವನ್, ನಿತ್ಯಾನಂದ ವಳಕಾಡು, ಪದ್ಮನಾಭ ಆಚಾರ್ಯ, ಸೀತಾರಾಮ ತೋಳ್ಪಡಿತ್ತಾಯ, ಮಂಜುನಾಥ ಹೆಬ್ಟಾರ್, ನಾರಾಯಣ ಗೋವಿಂದ ಹೆಗಡೆ ಹಾಗೂ ಶ್ರೀಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಉಪಸ್ಥಿತರಿದ್ದರು. ಶ್ರೀಮಠದ ರಮಣ ಆಚಾರ್ಯ ನಿರೂಪಿಸಿ ವಂದಿಸಿದರು.


Post a Comment