".

Header Ads

ಪುರೋಹಿತನೆಂದು ಮದುವೆಯಾಗಲು ನಿರಾಕರಿಸಿದ ಪ್ರೇಯಸಿ - ಯುವಕ ಆತ್ಮಹತ್ಯೆ!

 

ಕಾರವಾರದಲ್ಲಿ ಪ್ರೀತಿಸಿದ ಯುವತಿ ವಿವಾಹಕ್ಕೆ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಅಂಕೋಲಾ ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ಈ ಘಡನೆ ನಡೆದಿದ್ದು ಆತ್ಮಹತ್ಯೆ ಮಾಡಿಕೊಂಡವನು ಪವನ್ ಭಟ್ (24) ಎಂಬ ಯುವಕನಾಗಿದ್ದಾನೆ.

ಪವನ್ ಭಟ್ ವೃತ್ತಿಯಿಂದ ಪೌರೋಹಿತ್ಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದನು. ಇದೇ ಊರಿನ ಯುವತಿಯೊಂದಿಗೆ ಪ್ರೀತಿಯ ಸಂಬಂಧ ಹೊಂದಿದ್ದನು ಎನ್ನಲಾಗಿದೆ.

ಪೌರೋಹಿತ್ಯ ಮಾಡುವ ನಿನ್ನನ್ನು ನಾನು ಮದುವೆಯಾಗೋದಿಲ್ಲ ಎಂದು ಲವ್ ಮಾಡಿದ ಯುವತಿಯೇ ಪ್ರೀತಿ ನಿರಾಕರಿಸಿದ ಹಿನ್ನೆಲೆ ಮನನೊಂದು ಪವನ್ ಸೂಸೈಡ್ ಮಾಡಿಕೊಂಡಿದ್ದಾನೆ.

ಸ್ಥಳಕ್ಕೆ ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಯುವತಿಯ ವಿಚಾರಣೆಗೆ ಪೊಲೀಸರು ಮುಂದಾಗಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

 

Powered by Blogger.