".

Header Ads

ಮಣಿಪಾಲ :ಇಬ್ಬರು ಮಕ್ಕಳೊಂದಿಗೆ ಪತ್ನಿ ನಾಪತ್ತೆ!

 


ವಿವಾಹಿತ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ.

ಶಿವಳ್ಳಿ ಗ್ರಾಮದ ಕುಂಜಿಬೆಟ್ಟುವಿನ ಸಂತೋಷ ನಗರ ನಿವಾಸಿ ಸಂಜೀವ ಎಂಬವರ ಪತ್ನಿ ಮಂಜುಳಾ(22), ಮಕ್ಕಳಾದ ಸಮೀಕ್ಷಾ(4) ಮತ್ತು ಅಪೇಕ್ಷಾ(2) ನಾಪತ್ತೆಯಾದವರು.

ಸಂಜೀವ ಅವರು ಶಬರಿಮಲೆ ಯಾತ್ರೆಗೆ ತೆರಳಿದ್ದರು. ಈ ವೇಳೆ ಜ.13ರಂದು 10 ಗಂಟೆಯಿಂದ ಜ.14ರ ಬೆಳಗ್ಗೆ 5 ಗಂಟೆ ಅವಧಿಯಲ್ಲಿ ನಾಪತ್ತೆಯಾಗಿದ್ದಾರೆ. ಸಂಬಂಧಿಕರು ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Powered by Blogger.