ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ
ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಇಂದು (ಜ.20) ಅಧಿಕಾರ ವಹಿಸಿಕೊಂಡರು. ಜೆ.ಪಿ. ನಡ್ಡಾ ಅಧಿಕಾರಾವಧಿ ಪೂರ್ಣಗೊಂಡ ಬೆನ್ನಲ್ಲೇ ಪಕ್ಷ ನಡೆಸಿದ ಚುನಾವಣೆಯಲ್ಲಿ ನಿತಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅವರ ಸಮ್ಮುಖದಲ್ಲಿ ನಿತಿನ್ ನಬಿನ್ ಪ್ರಮಾಣವಚನ ಸ್ವೀಕರಿಸಿದರು.26 ನೇ ವಯಸ್ಸಿನಲ್ಲಿ ಶಾಸಕರಾಗಿ ಗಮನ ಸೆಳೆದವರು ನಿತಿನ್ ನಬಿನ್. ಇದೀಗ ತಮ್ಮ 45 ನೇ ವಯಸ್ಸಿನಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿರೋದು ವಿಶೇಷ. ಬಿಹಾರದಿಂದ ಐದು ಬಾರಿ ಶಾಸಕರಾಗಿ ಮತ್ತು ರಾಜ್ಯದ ಪಿಡಬ್ಲ್ಯೂಡಿ ಸಚಿವರಾಗಿದ್ದರು. ಇತ್ತೀಚಿಗಷ್ಟೇ ಬಿಹಾರ ಬಿಜೆಪಿ ಶಾಸಕ ನಿತಿನ್ ನಬಿನ್ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಅನೇಕ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದರು. ಇದೀಗ ರಾಷ್ಟ್ರೀಯ ಅಧ್ಯಕ್ಷರಾದ ಅವರು ತಮಿಳುನಾಡು, ಕೇರಳ ಮತ್ತು ಅಸ್ಸಾಂ ಸೇರಿದಂತೆ ಅನೇಕ ಚುನಾವಣೆಗಳಲ್ಲಿ ಪಕ್ಷವನ್ನು ಮುನ್ನಡೆಸಬೇಕಾಗಿದೆ.

Post a Comment