".

Header Ads

ಉಡುಪಿ: ಪ್ರೌಢಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ

 ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀಡಿನಗುಡ್ಡೆಯಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಬರ್ಮವ್ವ (15) ಎಂದು ಗುರುತಿಸಲಾಗಿದೆ. ಈಕೆ ಬೋರ್ಡ್ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಹೆತ್ತವರೊಂದಿಗೆ ಗೀತಾ ಶೆಟ್ಟಿ ಎಂಬವರ ನಿವೇಶನದಲ್ಲಿದ್ದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಮನೆ ಮಂದಿ ಬೆಳಿಗ್ಗೆ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ‌.
ನಗರ ಪೋಲಿಸ್ ಠಾಣೆಯ ಎಸ್ ಐ, ಗಂಗಪ್ಪ,‌ಮುಖ್ಯ ಆರಕ್ಷಕಿಯರಾದ ಆಶಾ ಲತಾ, ಜಾಸ್ವ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ಮೃತ ದೇಹವನ್ನು ನೇಣುಕುಣಿಕೆಯಿಂದ ತೆರವುಗೊಳಿಸಲು, ಹಾಗೂ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು

Powered by Blogger.