".

Header Ads

ಎಲ್‌ಪಿಜಿ ಸಿಲಿಂಡರ್‌ ಕೊರತೆ; ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಸೂಚನೆ


 ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವು ಎಲ್‌ಪಿಜಿ ಸಿಲಿಂಡರ್‌ ಕೊರತೆಯನ್ನು ಎದುರಿಸುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಸಿಲಿಂಡರ್‌ ದೊರಕದೆ ಹೋಟೆಲ್‌ ಮಾಲೀಕರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೇ ಬ್ಲ್ಯಾಕ್‌ ಮಾರ್ಕೆಟ್‌ನಲ್ಲಿ ಸಿಲಿಂಡರ್‌ ಬೆಲೆ ಮೂರು ಪಟ್ಟು ಹೆಚ್ಚಳಕ್ಕೆ ಮಾರಾಟವಾಗುತ್ತಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಹಲವು ಹೋಟೆಲ್‌ಗಳು ಮುಚ್ಚುವ ಪರಿಸ್ಥಿತಿಗೆ ಬಂದಿದೆ.ಹೋಟೆಲ್‌ಗಳನ್ನೇ ಅವಲಂಬಿಸಿರುವ ವಿದ್ಯಾರ್ಥಿಗಳು, ಉದ್ಯೋಗಿಗಳು ಆಹಾರದ ಕೊರತೆಯನ್ನು ಎದುರಿಸುತ್ತಿದ್ದು, ಈ ಪರಿಸ್ಥಿತಿಯ ನಡುವೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ನಾಗರಿಕರಿಗೆ ಬುಕಿಂಗ್‌ ಕುರಿತು ಭಯ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದೆ. ಮುಂದಿನ ಎರಡು ದಿನಗಳಲ್ಲಿ ಸಿಲಿಂಡರ್‌ಗಳನ್ನು ಮನೆಗಳಿಗೆ ವಿತರಿಸಲಾಗುವುದು. ಅಲ್ಲದೇ ಎಲ್‌ಪಿಜಿ ಸಿಲಿಂಡರ್‌ ಉತ್ಪಾದನೆಯನ್ನು ಶೇ.25 ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಹೊಸ ಮೂಲಗಳಿಂದ ಎಲ್‌ಎನ್‌ಜಿ ಸರಕುಗಳನ್ನು ಖರೀದಿ ಮಾಡಲಾಗುತ್ತಿದೆ ಎಂದು ಸಚಿವಾಲಯ ಸ್ಪಷ್ಟವಾಗಿ ತಿಳಿಸಿದೆ.

Powered by Blogger.