ಕೆಎಸ್‌ಆರ್‌ಟಿಸಿ ಬಸ್‌ನಿಂದ ಹೊರಗೆಸೆಯಲ್ಪಟ್ಟ ವಿದ್ಯಾರ್ಥಿನಿಯರು; ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಇಬ್ಬರು ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾ*ಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಪುತ್ತೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಗೇರುಕಟ್ಟೆ ಎಂಬಲ್ಲಿ ಅಕ್ಕ-ತಂಗಿ ಹತ್ತಿದ್ದರು. ವೇಗವಾಗಿ ಚಲಿಸುತ್ತಿದ್ದ ಬಸ್, ಕಳಿಯ ಗ್ರಾಮದ ರೇಷ್ಮೆರೋಡ್ ಎಂಬಲ್ಲಿ ತಿರುವಿನಲ್ಲಿ ಸಾಗುತ್ತಿದ್ದಾಗ ಬಸ್ಸಿನ ಬಾಗಿಲು ಏಕಾಏಕಿ ತೆರೆದುಕೊಂಡಿದೆ.ಈ ವೇಳೆ ಬಾಗಿಲ ಬಳಿಯೇ ನಿಂತಿದ್ದ ಅಕ್ಕ ರಸ್ತೆಗೆ ಎಸೆಯಲ್ಪಟ್ಟಿದ್ದಾಳೆ.
ಆಕೆಯನ್ನು ರಕ್ಷಿಸಲು ಹೋದ ತಂಗಿಯೂ ನಿಯಂತ್ರಣ ತಪ್ಪಿ ಬಸ್ಸಿನಿಂದ ಹೊರಕ್ಕೆ ಬಿದ್ದಿದ್ದಾಳೆ. ತಕ್ಷಣ ಸ್ಥಳೀಯರು ಓಡಿ ಬಂದು ವಿದ್ಯಾರ್ಥಿನಿಯರನ್ನು ರಕ್ಷಿಸಿ, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Post a Comment