ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಎಂಬಿಬಿಎಸ್ ವಿದ್ಯಾರ್ಥಿನಿ ಸಾವು
ಕಾಲೇಜು ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಇಬ್ಬರು ಸ್ನೇಹಿತೆಯರು ಗೇಟ್‌ನಿಂದ ಹೊರಬರುತ್ತಿದ್ದಂತೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಕೃತಿಕಾ (21) ಎಂದು ಗುರುತಿಸಲಾಗಿದೆ. ಈಕೆ ಮೈಲಸಂದ್ರದ ಬಿಇಎಮ್‌ಎಲ್ ಬಡಾವಣೆಯ ನಿವಾಸಿ. ಸ್ನೇಹಿತೆ ಹಂಸ (22) ಗಂಭೀರವಾಗಿ ಗಾಯಗೊಂಡಿದ್ದು ಆರ್‌ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಇಬ್ಬರು ವಿದ್ಯಾರ್ಥಿನಿಯರು ಸ್ನೇಹಿತೆಯರಾಗಿದ್ದು, ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ ಸಂಜೆ 4.15ರ ಸುಮಾರಿನಲ್ಲಿ ಕಾಲೇಜು ಮುಗಿಸಿಕೊಂಡು ಹಂಸ ಅವರು ತಮ ಆಕ್ಟೀವಾ ಸ್ಕೂಟರ್‌ನಲ್ಲಿ ಕೃತಿಕಾಳನ್ನು ಕೂರಿಸಿಕೊಂಡು ಕಾಲೇಜಿನ ಗೇಟ್ ಹೊರಗೆ ಹೋಗುತ್ತಿದ್ದಂತೆ ಅತಿವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕೆಳಗೆ ಬಿದ್ದಿದ್ದಾರೆ. ಆ ಸಂದರ್ಭದಲ್ಲಿ ಕೃತಿಕಾಳ ಹೊಟ್ಟೆಯ ಮೇಲೆಯೇ ಲಾರಿ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡರು.
ತಕ್ಷಣ ಸ್ಥಳೀಯರು ಆಟೋದಲ್ಲಿ ರಾಜರಾಜೇಶ್ವರಿ ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಕೆಂಗೇರಿ ಸಂಚಾರಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು,ಮಾ.12- ಕಾಲೇಜು ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಇಬ್ಬರು ಸ್ನೇಹಿತೆಯರು ಗೇಟ್‌ನಿಂದ ಹೊರಬರುತ್ತಿದ್ದಂತೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Post a Comment