".

Header Ads

ಕಾರ್ಕಳ: ಸ್ಕೂಟರ್ ಸ್ಕಿಡ್ ಆಗಿ ಸವಾರ ಸಾವು

 

ಕಾರ್ಕಳ ತಾಲೂಕು ಕೆದಿಂಜೆ ಗ್ರಾಮದ ಮಾವಿನಕಟ್ಟೆ ಬಳಿ ಸ್ಕೂಟರ್ ಸ್ಕಿಡ್ ಆಗಿ ಸವಾರ ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ (ಮಾ.19) ಮಧ್ಯಾಹ್ನ ನಡೆದಿದೆ.

ನಿಟ್ಟೆ ಗ್ರಾಮದ ಹರಿಶ್ಚಂದ್ರ ಗುಡಿಗಾರ್ (62) ಮೃತಪಟ್ಟವರು.

ಅವರು ನಂದಿಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾಚ್ ಮ್ಯಾನ್ ಕೆಲಸ ಮಾಡುತ್ತಿದ್ದು, ಗುರುವಾರ ಮಧ್ಯಾಹ್ನ ಸ್ಕೂಟರ್ ನಲ್ಲಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರಸ್ತೆಬದಿಯ ತಡೆಗೋಡೆಗೆ ಸ್ಕೂಟರ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಹರಿಶ್ಚಂದ್ರ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಮೃತಪಟ್ಟಿದ್ದಾರೆ.
ಈ‌ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Powered by Blogger.