".

Header Ads

ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಮೂವರು ದುರ್ಮರಣ

 


ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಶುಕ್ರವಾರ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮದುವೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಯಮರೂಪಿಯಾಗಿ ಬಂದ ಬಸ್ ಇವರ ಬದುಕನ್ನು ಬಲಿಪಡೆದಿದೆ.ಅಪಘಾತದಲ್ಲಿ ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ, ಉಜಿರೆ ನಿವಾಸಿಗಳಾದ ಶ್ರೀಧರ್ ಮತ್ತು ಜನಾರ್ದನ ಕೆರಿಮಾರ್ ಮೃತಪಟ್ಟಿದ್ದಾರೆ. ಇಬ್ಬರು ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಕೊನೆಯುಸಿರೆಳೆದಿದ್ದಾರೆ.ಸಕಲೇಶಪುರದಲ್ಲಿ ನಡೆದ ಮದುವೆ ಸಮಾರಂಭಕ್ಕೆ ತೆರಳಿ ವಾಪಸ್ ಊರಿಗೆ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ. ಎದುರಿನಿಂದ ಬಂದ ರಾಜಹಂಸ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಸುರೇಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Powered by Blogger.