ಘಟನೆಯ ವಿವರಗಳ ಪ್ರಕಾರ, 7 ವರ್ಷದ ಮಗುವಿನ ಕುತ್ತಿಗೆಯಲ್ಲಿದ್ದ ಸುಮಾರು 7 ಗ್ರಾಂ ತೂಕದ ಚಿನ್ನದ ಸರವನ್ನು, ಕೆ.ಟಿ.ಎಂ ಬೈಕ್ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಸಿ ಎಳೆದುಕೊಂಡು ಪರಾರಿಯಾಗಿದ್ದಾನೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 91/2026, ಕಲಂ 309(4) BNS 2023 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗುತ್ತಿದೆ.
ಇದೀಗ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಟಿ.ಎಂ ಬೈಕ್ ಸವಾರನೊಬ್ಬನ ಭಾವಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿದ್ದು, ಆತನೇ ಆರೋಪಿಯೆಂದು ಊಹಿಸಲಾಗುತ್ತಿದೆ. ಆದರೆ, ಈ ಬಗ್ಗೆ ತನಿಖೆ ನಡೆಸಿದ ವಿಟ್ಲ ಪೊಲೀಸರು, ಆ ಬೈಕ್ ಸವಾರನನ್ನು ವಿಚಾರಣೆಗೊಳಪಡಿಸಿದ್ದು, ಈತನಿಗೂ ಘಟನೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂಬುದು ಸ್ಪಷ್ಟವಾಗಿದೆ.
ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದು, ಆ ವ್ಯಕ್ತಿಯ ಕುರಿತು ಯಾವುದೇ ನಕಾರಾತ್ಮಕ ಅಭಿಪ್ರಾಯ ಅಥವಾ ತಪ್ಪು ಕಲ್ಪನೆಗಳನ್ನು ಹೊಂದಬಾರದು ಎಂದು ತಿಳಿಸಿದ್ದಾರೆ. ಕುಟುಂಬದವರ ಮನವಿಯ ಮೇರೆಗೆ ಈ ಸ್ಪಷ್ಟೀಕರಣ ನೀಡಲಾಗಿದೆ. ಪ್ರಸ್ತುತ, ನಿಜವಾದ ಆರೋಪಿಯನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
Post a Comment